ಅನ್ ಲಾಕ್-4‌: ಸೆ. 1ರಿಂದ ಮೆಟ್ರೋ ರೈಲು ಸಂಚಾರ ಆರಂಭ ಸಾಧ್ಯತೆ

ಅನ್ ಲಾಕ್ -4 ಸೆಪ್ಟೆಂಬರ್ 1 ರಿಂದ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭವಾಗುವ ಸಾಧ್ಯತೆ ಇದೆ. ಆದರೆ ಶಾಲಾ, ಕಾಲೇಜ್ ಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಅನ್ ಲಾಕ್ -4 ಸೆಪ್ಟೆಂಬರ್ 1 ರಿಂದ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಮೆಟ್ರೋ ರೈಲು ಸಂಚಾರ ಪುನರಾರಂಭವಾಗುವ ಸಾಧ್ಯತೆ ಇದೆ. ಆದರೆ ಶಾಲಾ, ಕಾಲೇಜ್ ಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೂ ತೆರೆಯಲು ಅನುಮತಿ ಪಡೆಯದ ಬಾರ್ ಗಳಿಗೆ ಕೌಂಟರ್ ನಲ್ಲಿ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಬಹದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಅನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದ್ದು, ನಾಲ್ಕನೇ ಹಂತಹದಲ್ಲಿ ಮೆಟ್ರೋ ಸೇವೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ಆದರೆ ಶಾಲಾ, ಕಾಲೇಜ್ ಗಳನ್ನು ತೆರೆಯುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com