ಮಹಾರಾಷ್ಟ್ರದ ರಾಯಗಢದಲ್ಲಿ ಕಟ್ಟಡ ಕುಸಿತ: 16ಕ್ಕೇರಿದ ಸಾವಿನ ಸಂಖ್ಯೆ,ಎನ್ ಡಿಆರ್ ಎಫ್ ತೀವ್ರ ಕಾರ್ಯಾಚರಣೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ. ಅವರಲ್ಲಿ 7 ಮಂದಿ ಪುರುಷರು ಮತ್ತು 9 ಮಂದಿ ಮಹಿಳೆಯರಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮತ್ತಷ್ಟು ನಾಗರಿಕರ ದೇಹಗಳು ಸಿಲುಕಿರುವ ಶಂಕೆಯಿದೆ.
ಅವಶೇಷಗಳಡಿಯಲ್ಲಿ ರಕ್ಷಣಾ ಪಡೆ ಕಾರ್ಯಾಚರಣೆ
ಅವಶೇಷಗಳಡಿಯಲ್ಲಿ ರಕ್ಷಣಾ ಪಡೆ ಕಾರ್ಯಾಚರಣೆ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ. ಅವರಲ್ಲಿ 7 ಮಂದಿ ಪುರುಷರು ಮತ್ತು 9 ಮಂದಿ ಮಹಿಳೆಯರಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮತ್ತಷ್ಟು ನಾಗರಿಕರ ದೇಹಗಳು ಸಿಲುಕಿರುವ ಶಂಕೆಯಿದೆ.

ಈ ಕಟ್ಟಡ ಕೇವಲ 10 ವರ್ಷಗಳಷ್ಟು ಹಳೆಯದ್ದು ಎಂದು ಹೇಳಲಾಗುತ್ತಿದೆ. ಬಹುಮಹಡಿ ಕಟ್ಟಡ ಕುಸಿದು ಬೀಳುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚಣೆ ಆರಂಭಿಸಿದರು. ಕಟ್ಟಡದಲ್ಲಿ 45 ಫ್ಲ್ಯಾಟ್ ಗಳಿದ್ದು, ಅವಶೇಷಗಳಡಿ ಸಿಲುಕಿಕೊಂಡಿದ್ದ 8 ಮಂದಿಯನ್ನು ಇದುವರೆಗೆ ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು 8 ಮಂದಿ ಕಾಣೆಯಾಗಿದ್ದಾರೆ.

ಘಟನೆ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರ ಪರಿಹಾರ: ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ ಒಂದೂವರೆ ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕಟ್ಟಡದ ಡೆವೆಲಪರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪುನರ್ವಸತಿ ಸಚಿವ ವಿಜಯ್ ವಡೆಟ್ಟಿವರ್ ತಿಳಿಸಿದ್ದಾರೆ.

ಕಟ್ಟಡದ ಡೆವೆಲಪರ್ ವಿರುದ್ಧ ದೂರು ದಾಖಲಿಸುವಂತೆ ನಾವು ಜಿಲ್ಲಾಧಿಕಾರಿಗೆ ಸೂಚಿಸಿದ್ದೇವೆ. ಡೆವಲಪರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಟ್ಟಡ ನಿರ್ಮಿಸಲು ಕಳಪೆ ಮಟ್ಟದ ವಸ್ತುಗಳನ್ನು ಬಳಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸಚಿವ ವಡೆಟ್ಟಿವರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com