ನೀಟ್, ಜೆಇಇ ಪರೀಕ್ಷೆ ವಿರುದ್ಧ ಎಲ್ಲಾ ಸಿಎಂಗಳು ಸುಪ್ರೀಂ ಮೊರೆ ಹೋಗಬೇಕು: ಮಮತಾ ಬ್ಯಾನರ್ಜಿ

ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು...
ವರ್ಚುವಲ್ ಸಭೆ
ವರ್ಚುವಲ್ ಸಭೆ

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು ಎಂದು ಪ್ರತಿಪಕ್ಷಗಳ ಸಿಎಂ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆ ನೀಡಿದ್ದಾರೆ.

ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿದ್ದ ಪ್ರತಿಪಕ್ಷ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಮಮತಾ, ನಾವು ಎಲ್ಲರೂ ಒಂದಾಗಿ ಸುಪ್ರೀಂ ಕೋರ್ಟ್ ಗೆ ಹೋಗೋಣ. ಅಲ್ಲಿ ಈ ವಿಷಯದ ಬಗ್ಗೆ ಮಾತನಾಡೋಣ. ಇದು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವನ್ನು ನೀಡುವಂತಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ದೌರ್ಜನ್ಯವನ್ನು ನಾನು ನೋಡಿರಲಿಲ್ಲ. ಈಗಿನ ಪರಿಸ್ಥಿತಿ ಬಹಳ ಗಂಭೀರವಾಗಿದೆ. ನಾವು ಮಕ್ಕಳಿಗಾಗಿ ಮಾತನಾಡಲೇಬೇಕಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಜೆಇಇ/ನೀಟ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಮುಂದಾಗದೆ ಹೋದರೆ ರಾಜ್ಯಗಳು ಒಂದಾಗಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಮಮತಾ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಮತಾ ಬ್ಯಾನರ್ಜಿ, ನೀಟ್ ಮತ್ತು ಜೆಇಇ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡುವ ಸಂಬಂಧ ಸುಪ್ರೀಂಕೋರ್ಟ್‌ಗೆ ಪರಾಮರ್ಶನಾ ಅರ್ಜಿ ಸಲ್ಲಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಕಾಂಗ್ರೆಸ್‌ನ ನಾಲ್ವರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com