ದೆಹಲಿ: 24 ಗಂಟೆಗಳಲ್ಲಿ 1693 ಹೊಸ ಸೋಂಕು ಪ್ರಕರಣ ದಾಖಲು

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 1693 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 
ದೆಹಲಿ-ಕೋವಿಡ್ 19
ದೆಹಲಿ-ಕೋವಿಡ್ 19

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 1693 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 

ಹೌದು.. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1693 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,65,764 ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು ಒಂದೇ ದಿನ 1154 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿನಿಂದ  ಗುಣಮುಖರಾದ ಸೋಂಕಿತರ ಸಂಖ್ಯೆ 1,48,897ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತುತ ಕೇವಲ 12,520 ಕೊರೋನಾ ಸಕ್ರಿಯ ಪ್ರಕರಣಗಳು ಮಾತ್ರ ಇದೆ.

ಅಂತೆಯೇ ಇಂದು ಒಂದೇ ದಿನ ದೆಹಲಿಯಲ್ಲಿ 17 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4347ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com