ಮಹಾರಾಷ್ಟ್ರದಲ್ಲಿ ಅಬ್ಬರಿಸಿದ ಕೊರೋನಾ ವೈರಸ್: ಒಂದೇ ದಿನ 14,888 ಹೊಸ ಪ್ರಕರಣಗಳು ದಾಖಲು

ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಮತ್ತೆ ಅಬ್ಬರಿಸಿದ್ದು, ಕಳೆದ 24 ಗಂಟೆಗಳಲ್ಲಿ 14,888 ಹೊಸ ಪ್ರಕರಣಗಳು ದಾಖಲಾಗಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಭಾರತದ ಕೊರೋನಾ ಹಾಟ್ ಸ್ಪಾಟ್ ರಾಜ್ಯವೆಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಮತ್ತೆ ಅಬ್ಬರಿಸಿದ್ದು, ಕಳೆದ 24 ಗಂಟೆಗಳಲ್ಲಿ 14,888 ಹೊಸ ಪ್ರಕರಣಗಳು ದಾಖಲಾಗಿವೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 14, 888 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7,18,711ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 295 ಮಂದಿ ಸೋಂಕಿತರು ಸಾವುನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 23,089ಕ್ಕೆ ಏರಿಕೆಯಾಗಿದೆ. ಅಂತೆಯೇ ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 7,637 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 5,22,427ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಪ್ರಸ್ತುತ 1,72,873 ಸಕ್ರಿಯ ಸೋಂಕು ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕತ್ಸೆ ಪಡೆಯಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com