ಪ. ಬಂಗಾಳದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಸೆ.20ರ ವರೆಗೆ ವಿಸ್ತರಣೆ, ಸೆ.7,11,12ರಂದು ಸಂಪೂರ್ಣ ಲಾಕ್ ಡೌನ್

ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಸೆಪ್ಟೆಂಬರ್ 20ರ ವರೆಗೆ ವಿಸ್ತರಿಸಲಾಗಿದ್ದು, ಸೆ.7, 11 ಹಾಗೂ 12 ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಸೆಪ್ಟೆಂಬರ್ 20ರ ವರೆಗೆ ವಿಸ್ತರಿಸಲಾಗಿದ್ದು, ಸೆ.7, 11 ಹಾಗೂ 12 ರಂದು ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.

ಇನ್ನು ದೆಹಲಿ, ಮುಂಬೈ ಹಾಗೂ ಚೆನ್ನೈ ಸೇರಿದಂತೆ ಆರು ನಗರಗಳಿಂದ ಬರುವ ವಿಮಾನಗಳ ಮೇಲಿನ ನಿರ್ಬಂಧವನ್ನು ಸಡಿಲಿಸಿದ್ದು, ಸೆಪ್ಟೆಂಬರ್ 1ರಿಂದ ವಾರದಲ್ಲಿ ಮೂರು ದಿನ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ನೀಡಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಲ್ ರೈಲು ಹಾಗೂ ಮೆಟ್ರೋ ಸಂಚಾರಕ್ಕೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದರೆ ಶಾಲಾ ಕಾಲೇಜ್ ಗಳು ಸೆಪ್ಟೆಂಬರ್ 20ರ ವರೆಗೆ ತೆರೆಯುವಂತಿಲ್ಲ ಎಂದು ಆದೇಶಿಸಿದ್ದಾರೆ.

ಇದಕ್ಕು ಮುನ್ನ ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕು ಎಂದು ಪ್ರತಿಪಕ್ಷಗಳ ಸಿಎಂ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಕರೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com