ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆಗಳಿಗೆ ಸರ್ಕಾರ ಬದ್ಧ: ಹರ್ಷವರ್ಧನ್ 

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್‌ನ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣದ ಇತರ ವಲಯಗಳಲ್ಲೂ ಅದೇ ರೀತಿಯ ಸುಧಾರಣೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಹರ್ಷವರ್ಧನ್ ಹೇಳಿದ್ದಾರೆ.
ಕೇಂದ್ರ ಸಚಿವ ಹರ್ಷ ವರ್ಧನ್
ಕೇಂದ್ರ ಸಚಿವ ಹರ್ಷ ವರ್ಧನ್

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್‌ನ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣದ ಇತರ ವಲಯಗಳಲ್ಲೂ ಅದೇ ರೀತಿಯ ಸುಧಾರಣೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಹರ್ಷವರ್ಧನ್ ಹೇಳಿದ್ದಾರೆ.

'ಆರೋಗ್ಯ ರಕ್ಷಣೆ ವೃತ್ತಿಪರರಿಗಾಗಿ ರಾಷ್ಟ್ರೀಯ ಆಯೋಗ ಮಸೂದೆ' ಯನ್ನು ಉಲ್ಲೇಖಿಸಿದ ಸಚಿವರು, ಈ ಕಾನೂನು ಅಂಗೀಕಾರಗೊಂಡರೆ, 50 ಕ್ಕೂ ಹೆಚ್ಚು ಆರೋಗ್ಯರಕ್ಷಣೆ ವೃತ್ತಿಗಳ ನಿಯಂತ್ರಣ ಮತ್ತು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಅವರೊಂದಿಗೆ ರಾಜಸ್ಥಾನದಲ್ಲಿ ಎರಡು ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಮೂರು ಸೂಪರ್ ಸ್ಪೆಷಾಲಿಟಿ ಬ್ಲಾಕ್‍ಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ನಂತರ ಡಾ ಹರ್ಷವರ್ಧನ್‍ ಮಾತನಾಡಿದರು. 

ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಕ್ರಮವಾಗಿ ಎಲ್ಲಾ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಅನ್ನು  ಪರಿಚಯಿಸಲಾಗಿದೆ. ನಿಯಮಗಳಲ್ಲಿ ಸೂಕ್ತವಾದ ಬದಲಾವಣೆಗಳ ಮೂಲಕ ರಾಜ್ಯ ಮಟ್ಟದಲ್ಲಿ ಸಾಮಾನ್ಯ ಸಮಾಲೋಚನೆಯನ್ನು ಸಹ ಪರಿಚಯಿಸಲಾಗಿದೆ. ಈ ಕ್ರಮಗಳು ವೈದ್ಯಕೀಯ ಪ್ರವೇಶದಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ತಂದಿವೆ. ಅಲ್ಲದೆ, ವಿದ್ಯಾರ್ಥಿಗಳ ಗುಣಮಟ್ಟ ಮತ್ತು ವೈದ್ಯಕೀಯ ಶಿಕ್ಷಣದ  ಒಟ್ಟಾರೆ ಗುಣಮಟ್ಟವನ್ನು ಸುಧಾರಿಸಿದೆ ಎಂದು ಡಾ ಹರ್ಷವರ್ಧನ್‍ ಹೇಳಿದ್ದಾರೆ.

‘ವೈದ್ಯಕೀಯ ಶಿಕ್ಷಣದ ಇತರ ಕ್ಷೇತ್ರಗಳಲ್ಲೂ ಇದೇ ರೀತಿಯ ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ದೇಶಾದ್ಯಂತ ಇನ್ನೂ 22 ಏಮ್ಸ್ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ದೇಶ ಪ್ರಗತಿ ಕಂಡಿದೆ. ಈ ಪೈಕಿ ಆರು ಸಂಸ್ಥೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದು, 14 ಕಾಲೇಜುಗಳಲ್ಲಿ ಎಂಬಿಬಿಎಸ್  ತರಗತಿಗಳು ಆರಂಭವಾಗಿವೆ ಎಂದು ಡಾ.ಹರ್ಷವರ್ಧನ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com