ಇಸ್ರೋ
ಇಸ್ರೋ

ಕೋವಿಡ್-19 ಕಾರಣ "ಯುವ ವಿಜ್ಞಾನಿಗಳು" ಕಾರ್ಯಕ್ರಮ ರದ್ದುಗೊಳಿಸಿದ ಇಸ್ರೋ

ಕೋವಿಡ್-19 ಕಾರಣದಿಂದಾಗಿ ಸರ್ಕಾರಿ ಸ್ವಾಮ್ಯದ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಯುವ ವಿಜ್ಞಾನಿಗಳು (ಯುವಿಕ-2020) ಕಾರ್ಯಕ್ರಮವನ್ನು ರದ್ದುಗೊಳಿಸಿದೆ. 

ಬೆಂಗಳೂರು: ಕೋವಿಡ್-19 ಕಾರಣದಿಂದಾಗಿ ಸರ್ಕಾರಿ ಸ್ವಾಮ್ಯದ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಯುವ ವಿಜ್ಞಾನಿಗಳು (ಯುವಿಕ-2020) ಕಾರ್ಯಕ್ರಮವನ್ನು ರದ್ದುಗೊಳಿಸಿದೆ. 

8-9 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಮೇ.11-22  ವರೆಗೆ ಈ ಯೋಜನೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಮಾರ್ಚ್ ತಿಂಗಳಿನಿಂದ ಕೊರೋನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ವಿದ್ಯಾರ್ಥಿಗಳಿಗೆ ದೇಶದ ಬಾಹ್ಯಾಕಾಶ ಅಪ್ಲಿಕೇಷನ್ ಹಾಗೂ ತಂತ್ರಜ್ಞಾನಗಳನ್ನು ತಿಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು, ಇಸ್ರೋ ಸಂಸ್ಥೆಯ ನಾಲ್ಕು ಕೇಂದ್ರಗಳಿಂದ ಸುಮಾರು 100 ವಿದ್ಯಾರ್ಥಿಗಳನ್ನು ಇದಕ್ಕಾಗಿ ಆಯ್ಕೆ ಮಾಡಲಾಗುತ್ತಿತ್ತು. 

ಪ್ರತಿ ಜಿಲ್ಲೆಗಳಿಂದ ಮೂವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ, ಯುಆರ್ ರಾವ್ ಬಾಹ್ಯಾಕಾಶ ಕೇಂದ್ರ (ಬೆಂಗಳೂರು) ಅಹ್ಮದಾಬಾದ್ ನಲ್ಲಿರುವ ಸ್ಪೇಸ್ ಅಪ್ಲಿಕೇಷನ್ಸ್ ಸೆಂಟರ್, ಈಶಾನ್ಯ ಬಾಹ್ಯಾಕಾಶ ಕೇಂದ್ರ (ಶಿಲ್ಲಾಂಗ್) ಗೆ ಕರೆದೊಯ್ದು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಾಗುತ್ತಿತ್ತು. ಈ ಯೋಜನೆಗಾಗಿ ಮಾರ್ಚ್ ತಿಂಗಳಲ್ಲಿ 368 ಅರ್ಹ ವಿದ್ಯಾರ್ಥಿಗಳ ಪೈಕಿ 113 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com