ಕೋವಿಡ್-19: ಅಮಿತ್ ಶಾ ಗುಣಮುಖ, ಶೀಘ್ರದಲ್ಲಿಯೇ ಡಿಸ್ಚಾರ್ಜ್- ಏಮ್ಸ್ 

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ- ಏಮ್ಸ್ ಶನಿವಾರ ತಿಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿದ್ದು,ಶೀಘ್ರದಲ್ಲಿಯೇ
ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ- ಏಮ್ಸ್ ಶನಿವಾರ ತಿಳಿಸಿದೆ.

ಆಗಸ್ಟ್ 2 ರಂದು ಅಮಿತ್ ಶಾಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಆಗಸ್ಟ್ 14 ರಂದು ನೆಗೆಟಿವ್ ವರದಿಯಾಗಿತ್ತು.
ಆದಾಗ್ಯೂ,ಸೋಂಕಿನಿಂದ ಗುಣಮುಖರಾದ ಬಳಿಕವೂ ವೈದ್ಯಕೀಯ ಆರೈಕೆಗಾಗಿ ಆಗಸ್ಟ್ 18 ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ಕೋವಿಡ್ -19 ಸೋಂಕಿನಿಂದ ಗುಣಮುಖರಾಗಿದ್ದರೂ ವೈದ್ಯಕೀಯ ಆರೈಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅಮಿತ್ ಶಾ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದಾರೆ ಎಂದು ಏಮ್ಸ್  ಮಾಧ್ಯಮ ಮತ್ತು ಶಿಷ್ಟಾಚಾರ ವಿಭಾಗದ ಮುಖ್ಯಸ್ಥೆ ಡಾ. ಅರ್ತಿ ವಿಜ್ ತಿಳಿಸಿದ್ದಾರೆ.

ಕಳೆದ ಮೂರು ನಾಲ್ಕು ದಿನಗಳಿಂದ ಆಯಾಸ ಹಾಗೂ ದೇಹ ನೋವು ಕಾಣಿಸಿಕೊಂಡಿರುವ ಅಮಿತ್ ಶಾ ಅವರಿಗೆ ಕೋವಿಡ್-19
ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಈಗ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ತನ್ನ ಕೆಲಸವನ್ನು ಮುಂದುವರೆಸಿದ್ದಾರೆ
ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com