
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 8,46,278 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 8,46,278 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 30ರವರೆಗೂ 4,23,07,914 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಇನ್ನು ನಿನ್ನೆ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 78,761 ಮಂದಿಯಲ್ಲಿ ವೈರಸ್ ತಗಲಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 35,42,734ಕ್ಕೆ ತಲುಪಿದೆ. ಅಲ್ಲದೆ 24 ಗಂಟೆಗಳಲ್ಲಿ 948 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಕೂಡ 63,498ಕ್ಕೆ ಏರಿಕೆಯಾಗಿದೆ.
Advertisement