ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
Published: 01st December 2020 02:57 PM | Last Updated: 01st December 2020 02:57 PM | A+A A-

ಭಾರತೀಯ ಸೇನೆ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಇಲ್ಲಿನ ಪೂಂಚ್ ಜಿಲ್ಲೆಯ ಮೇದಾರ್ ಸೆಕ್ಟರ್ ಬಳಿ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಗಡಿ ಭದ್ರತಾ ಸಿಬ್ಬಂದಿಯೋರ್ವರು ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ.
ಪಾಕ್ ಸೇನೆಗೆ ಭಾರತೀಯ ಯೋಧರು ಪ್ರತ್ಯುತ್ತರವಾಗಿ ನಿರಂತರವಾಗಿ ಗುಂಡಿನ ದಾಳಿ ನಡೆಸಿದ್ದು ನಂತರ ಪಾಕ್ ಸೇನೆ ಗುಂಡಿನ ದಾಳಿ ನಿಲ್ಲಿಸಿದೆ.