ಪಿಎಂ ಕೇರ್ಸ್ ಹಣ ಎಲ್ಲಿಗೆ ಹೋಯಿತು?: ಮಮತಾ ಬ್ಯಾನರ್ಜಿ
ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪಿಎಂ ಕೇರ್ಸ್ ನಿಧಿಯ ಹಣ ಎಲ್ಲಿಗೆ ಹೋಯಿತು? ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಮೋದಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
Published: 01st December 2020 07:08 PM | Last Updated: 01st December 2020 07:08 PM | A+A A-

ಮಮತಾ ಬ್ಯಾನರ್ಜಿ
ಕೋಲ್ಕತಾ: ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪಿಎಂ ಕೇರ್ಸ್ ನಿಧಿಯ ಹಣ ಎಲ್ಲಿಗೆ ಹೋಯಿತು? ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಮೋದಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಆಸೆಯಂತೆ ತಮ್ಮ ಸರ್ಕಾರ ಕಾರ್ಯನಿರ್ವಹಿಸುವುದಿಲ್ಲ. ಪಿಎಂ ಕೇರ್ಸ್ ಫಂಡ್‌ನ ಎಲ್ಲಾ ಹಣ ಎಲ್ಲಿ ಹೋಗಿದೆ? ಈ ನಿಧಿಗಳ ಭವಿಷ್ಯದ ಬಗ್ಗೆ ಯಾರಿಗಾದರೂ ತಿಳಿದಿದೆಯೇ? ಲಕ್ಷ ಕೋಟಿ ಹಣ ಎಲ್ಲಿ ಹೋಯಿತು? ಏಕೆ ಆಡಿಟ್ ಮಾಡಲಿಲ್ಲ? ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
ಇಂದು ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಕೇಂದ್ರ ಸರ್ಕಾರ ನಮಗೆ ಏನು ನೀಡಿದೆ? ಎಂದು ಪ್ರಶ್ನಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಿಕೊಂಡು ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದೆ. ಆದರೆ ದೇಶದ ಇತರ ರಾಜ್ಯಗಳಿಗಿಂತ ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಮಮತಾ ಹೇಳಿದ್ದಾರೆ.