ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 4.28 ಲಕ್ಷಕ್ಕೆ ಇಳಿಕೆ

ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 4,28,644ಕ್ಕೆ ಇಳಿದಿದ್ದು, ಸದ್ಯ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಕೇವಲ ಶೇ 4.6ರಷ್ಟಿವೆ.

Published: 02nd December 2020 10:00 AM  |   Last Updated: 02nd December 2020 10:00 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 4,28,644ಕ್ಕೆ ಇಳಿದಿದ್ದು, ಸದ್ಯ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಕೇವಲ ಶೇ 4.6ರಷ್ಟಿವೆ.

ಕಳೆದ 24 ತಾಸಿನಲ್ಲಿ ಸಂಭವಿಸಿದ 501 ಸಾವು ಪ್ರಕರಣಗಳ ಪೈಕಿ ಶೇ 81.12ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶUಳಿಂದ ವರದಿಯಾಗಿವೆ. ಇದೇ ಅವಧಿಯಲ್ಲಿ 36,604 ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಹೊಸ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳು 11,349ರಷ್ಟು ಹೆಚ್ಚಾಗಿವೆ.

ಕೇರಳ, ದೆಹಲಿ, ಕರ್ನಾಟಕ ಮತ್ತು ಚತ್ತೀಸ್ ಗಢ ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಇಳಿಮುಖವಾಗಿದ್ದರೆ, ಉತ್ತರಾಖಂಡ, ಗುಜರಾತ್, ಅಸ್ಸಾಂ ಮತ್ತು ಗೋವಾದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.

ದೇಶದಲ್ಲಿ ಚೇತರಿಕೆ ಪ್ರಕರಣಗಳ ಸಂಖ್ಯೆ 89,32,647ಕ್ಕೆ ಏರಿಕೆಯಾಗುವುದರೊಂದಿಗೆ ಚೇತರಿಕೆ ಪ್ರಮಾಣ ಶೇ 93.94 ಕ್ಕೆ ಏರಿಕೆಯಾಗಿದೆ. ಕಳೆದ 24 ತಾಸಿನಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇ 75ಕ್ಕೂ ಹೆಚ್ಚು ಪ್ರಕರಣಗಳು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವರದಿಯಾಗಿವೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 3,837, ದೆಹಲಿಯಲ್ಲಿ 3,726, ಕೇರಳದಲ್ಲಿ 3,382 ಪ್ರಕರಣಗಳು ಸೋಮವಾರ ವರದಿಯಾಗಿವೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp