ಪೋಲಾವರಂ ಜಲಾಶಯ ಬಳಿ 100 ಅಡಿ ಎತ್ತರದ ವೈಎಸ್ ಆರ್ ಪ್ರತಿಮೆ ಸ್ಥಾಪನೆಗೆ ಚಂದ್ರಬಾಬು ನಾಯ್ಡು ಆಕ್ಷೇಪ

ಪೋಲಾವರಂ ಜಲಾಶಯ ಬಳಿ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಹೊರಟಿರುವ ಆಂಧ್ರ ಪ್ರದೇಶ ಸರ್ಕಾರದ ಕ್ರಮವನ್ನು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರವಾಗಿ ಆಕ್ಷೇಪಿಸಿದ್ದಾರೆ. 
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು

ವಿಜಯವಾಡ: ಪೋಲಾವರಂ ಜಲಾಶಯ ಬಳಿ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ 100 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲು ಹೊರಟಿರುವ ಆಂಧ್ರ ಪ್ರದೇಶ ಸರ್ಕಾರದ ಕ್ರಮವನ್ನು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಜಲಾಶಯದ ಬಳಿ ರಾಜ್ಯ ಸರ್ಕಾರ ಅಪಾರ ಮೊತ್ತದ ಪ್ರತಿಮೆ ಸ್ಥಾಪಿಸುವ ಉದ್ದೇಶವೇನೆಂದು ಚಂದ್ರಬಾಬು ನಾಯ್ಡು ಪ್ರಶ್ನಿಸಿದ್ದಾರೆ.

ಪೋಲಾವರಂ ಜಲಾಶಯ ರಾಷ್ಟ್ರೀಯ ಯೋಜನೆಯಾಗಿದ್ದು, ರಾಜ್ಯ ಸರ್ಕಾರ ಈ ಯೋಜನೆಗೆ ಒಂದು ರೂಪಾಯಿ ಸಹ ಖರ್ಚು ಮಾಡಿಲ್ಲ. ಪ್ರತಿಮೆ ಸ್ಥಾಪಿಸುವ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿಲ್ಲ.ತಾನು ಏನು ಬೇಕಾದರೂ ಮಾಡಲು ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರಕ್ಕೆ ನೈತಿಕ ಹಕ್ಕಿಲ್ಲ ಎಂದು ನಾಯ್ಡು ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com