ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿಸೆಂಬರ್ 16ರ ವರೆಗೆ ವಿಸ್ತರಣೆ

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.
ಉಮರ್ ಖಾಲಿದ್
ಉಮರ್ ಖಾಲಿದ್

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ದಿನೇಶ್ ಕುಮಾರ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿದ್ದಾರೆ.

ಆರೋಪಿಗೆ ಹೆಚ್ಚಿನ ಕಸ್ಟಡಿಯ ಅಗತ್ಯವಿಲ್ಲ. ಹೀಗಾಗಿ ಆರೋಪಿಯ ವಕೀಲರು ಜಾಮೀನು  ಕೋರಿ ಅರ್ಜಿ ಸಲ್ಲಿಸಬಹುದು. ನಂತರ ಆರೋಪಿಗಳ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.

ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com