ಪಟಾಕಿ ಮಾರಾಟ-ಬಳಕೆ ನಿಷೇಧ ವಿಸ್ತರಣೆ: ಹಸಿರು ನ್ಯಾಯಪೀಠ ಆದೇಶ

ಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೋನಾ ಸೋಂಕು ಹೆಚ್ಚಾಗಿರುವ, ಗಾಳಿಯ ಗುಣಮಟ್ಟ ಕಳಪೆಯಾಗಿರುವ ದೆಹಲಿ ಹಾಗೂ ಸುತ್ತಮತ್ತಲಿನ ನಗರ-ಪಟ್ಟಣಗಳಲ್ಲಿ ಇದೇ ಪರಿಸ್ಥಿತಿ ಎದುರಾಗಿರುವ ಇತರೆ ಕಡೆಯಲ್ಲೂ ಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಹಸಿರು ನ್ಯಾಯಪೀಠದ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪೀಠ ಈ ಬಗ್ಗೆ ನಿರ್ದೇಶನ ನೀಡಿದೆ. 

ಗಾಳಿಯ ಗುಣಮಟ್ಟ ಮಧ್ಯಮ ಪ್ರಮಾಣಕ್ಕಿಂತಲೂ ಕಡಿಮೆ ಇರುವ ನಗರಗಳಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಸ ಕೊಡಬಾರದು ಎಂಬ ಷರತ್ತು ಹಾಕಿದೆ. 

ಗಾಳಿಯ ಗುಣಮಟ್ಟ ಮಧ್ಯಮ ಹಂತದಲ್ಲಿರುವ ನಗರ- ಪಟ್ಟಣದಲ್ಲಿ ಮಾತ್ರ ಕ್ರಿಸ್ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾತ್ರಿ ಕೆಲ ಸಮಯದವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅನುಮತಿ ನೀಡಲಾಗಿದೆ. ಒಂದು ವೇಳೆ ನಿಷೇಧಿತ ಪಟಾಕಿಗಳ ಮಾರಾಟವಾಗುತ್ತಿದ್ದರೆ ಅವುಗಳನ್ನು ಕೂಡಲೇ ವಶಕ್ಕೆ ತೆಗೆದುಕೊಂಡು ಅವರಿಗೆ ದಂಡ ಹಾಕಬೇಕು ಎಂದೂ ಪೀಠ ಎಚ್ಚರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com