ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, 8 ಮಂದಿ ದುರ್ಮರಣ
ಮರಳು ತುಂಬಿದ ಲಾರಿಯೊಂದು ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
Published: 02nd December 2020 10:12 AM | Last Updated: 02nd December 2020 10:12 AM | A+A A-

ಸಂಗ್ರಹ ಚಿತ್ರ
ಉತ್ತರಪ್ರದೇಶ: ಮರಳು ತುಂಬಿದ ಲಾರಿಯೊಂದು ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕೌಸಂಭಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಸ್ಕಾರ್ಪಿಯೋ ವಾಹನದಲ್ಲಿ 10 ಮಂದಿ ಪ್ರಯಾಣಿಕರು ವಿವಾಹ ಸಮಾರಂಭಕ್ಕೆ ತೆರಳಿ ಹಿಂದುರುಗುತ್ತಿದ್ದರು. ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಲಾಗಿದ್ದು, ಈ ವೇಳೆ ಮರಳು ತುಂಬಿದ್ದ ಲಾರಿ ಕಾರಿನ ಮೇಲೆ ಏಕಾಏಕಿ ಮಗುಚಿ ಬಿದ್ದಿದೆ.
ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ತನಿಖೆ ಆರಂಭಿಸಿದ್ದು, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.