ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 36,604 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 95 ಲಕ್ಷ

ದೇಶದಲ್ಲಿಂದು 36,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖಅಯೆ 95 ಲಕ್ಷ ಗಡಿಯತ್ತ ಸಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿಂದು 36,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖಅಯೆ 95 ಲಕ್ಷ ಗಡಿಯತ್ತ ಸಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,99,414ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 501 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,38,122ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ. 

ಈ ನಡುವೆ 94,99,414 ಮಂದಿ ಒಟ್ಟು ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 43,062 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 89,32,647ಕ್ಕೆ ಏರಿಕೆಯಾಗಿದೆ. 

ದಿನದಿಂದ ದಿನಕ್ಕೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,28,644ಕ್ಕೆ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com