ಇಂದು ರೈತರ ಜತೆ ಕೇಂದ್ರದ ಮಹತ್ವದ ಮಾತುಕತೆ ಹಿನ್ನೆಲೆ, ಶಾ ಭೇಟಿಯಾಗಲಿರುವ ಅಮರೀಂದರ್ ಸಿಂಗ್

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. 

Published: 03rd December 2020 12:56 AM  |   Last Updated: 03rd December 2020 12:24 PM   |  A+A-


Amarinder1

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್

Posted By : Nagaraja AB
Source : The New Indian Express

ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ಇಂದು ಬೆಳಗ್ಗೆ ಶಾ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿರುವ ಅಮರೀಂದರ್ ಸಿಂಗ್, ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಶಾಸನಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಎಲ್ಲರ ಸಾಮೂಹಿಕ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರ ಮತ್ತು ರೈತರ ನಡುವಣ ಮಧ್ಯಸ್ಥಿಕೆಗೆ ತಾವು ಹಾಗೂ ಅವರ ಸರ್ಕಾರ ಬದ್ಧವಾಗಿರುವುದಾಗಿ ಸಿಂಗ್ ಹೇಳಿದ್ದಾರೆ.  ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಹೆಚ್ಚಿನವರು ಪಂಜಾಬ್ ರಾಜ್ಯದವರಾಗಿದ್ದಾರೆ.  ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಏಳುದಿನಗಳಿಂದ ಅವರು ಪ್ರತಿಭಟನೆಗೆ ಕುಳಿತಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp