ಕೋವಿಡ್-19: ದೇಶದಾದ್ಯಂತ 24 ಗಂಟೆಗಳಲ್ಲಿ 35,551 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 95 ಲಕ್ಷ
ದೇಶದಲ್ಲಿಂದು 35,551 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
Published: 03rd December 2020 09:45 AM | Last Updated: 03rd December 2020 12:25 PM | A+A A-

ಸಂಗ್ರಹ ಚಿತ್ರ
ನವದೆಹಲಿ: ದೇಶದಲ್ಲಿಂದು 35,551 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 526 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,38,648ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
With 35,551 new #COVID19 infections, India's total cases rise to 95,34,965
— ANI (@ANI) December 3, 2020
With 526 new deaths, toll mounts to 1,38,648. Total active cases at 4,22,943
Total discharged cases at 89,73,373 with 40,726 new discharges in the last 24 hrs pic.twitter.com/UvcX9z2aaX
ಈ ನಡುವೆ 95,34,965 ಮಂದಿ ಒಟ್ಟು ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 40,726 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 89,73,373ಕ್ಕೆ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,22,943ಕ್ಕೆ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಭಾರತದಲ್ಲಿ ನಿನ್ನೆ ಒಂದೇ ದಿನ 11,11,698 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,35,57,647 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Total number of samples tested up to 2nd December is 14,35,57,647 including 11,11,698 samples tested yesterday: Indian Council of Medical Research (ICMR) pic.twitter.com/5JI75d6ULk
— ANI (@ANI) December 3, 2020