ಮಹಾ ಎಂಎಲ್ ಸಿ ಚುನಾವಣೆ: 58 ವರ್ಷಗಳ ನಂತರ ನಾಗ್ಪುರ ಪದವೀಧರ ಕ್ಷೇತ್ರ ಗೆದ್ದ ಕಾಂಗ್ರೆಸ್
ಮಹಾರಾಷ್ಟ್ರ ವಿಧಾನ ಪರಿಷತ್ತಿನ ನಾಗ್ಪುರ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಭಿಜಿತ್ ವಂಜಾರಿ ಅವರು ಬಿಜೆಪಿ ಅಭ್ಯರ್ಥಿ ಸಂದೀಪ್ ಜೋಶಿ ವಿರುದ್ಧ 18,910 ಮತಗಳ ಅಂತರದಿಂದ ಶುಕ್ರವಾರ ಭರ್ಜರಿ ಗೆಲುವು ಸಾಧಿಸಿದ್ದಾರೆ.
Published: 04th December 2020 08:28 PM | Last Updated: 04th December 2020 08:28 PM | A+A A-

ಕಾಂಗ್ರೆಸ್
ನಾಗ್ಪುರ: ಮಹಾರಾಷ್ಟ್ರ ವಿಧಾನ ಪರಿಷತ್ತಿನ ನಾಗ್ಪುರ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಭಿಜಿತ್ ವಂಜಾರಿ ಅವರು ಬಿಜೆಪಿ ಅಭ್ಯರ್ಥಿ ಸಂದೀಪ್ ಜೋಶಿ ವಿರುದ್ಧ 18,910 ಮತಗಳ ಅಂತರದಿಂದ ಶುಕ್ರವಾರ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಳೆದ 58 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ ನಾಗ್ಪುರದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕೇಸರಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಈ ಹಿಂದೆ ಹಲವು ಬಾರಿ ನಾಗ್ಪುರ ಪದವೀಧರರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಈ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಪ್ರಸ್ತುತ ನಾಗ್ಪುರ ನಗರದ ಮೇಯರ್ ಆಗಿರುವ ಜೋಶಿ ಮತ್ತು ಮತ್ತು ಮಹಾ ವಿಕಾಸ್ ಅಘಾಡಿ(ಎಂವಿಎ) ಅಭ್ಯರ್ಥಿ ವಂಜಾರಿ ಅವರ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ವಂಜಾರಿ ಗೆಲುವು ಸಾಧಿಸಿದ್ದಾರೆ.