ಫ್ರಾನ್ಸ್ ನಲ್ಲಿ ಮಲ್ಯಗೆ ಸೇರಿದ 14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

 ಅಕ್ರಮ ಹಣ ವರ್ಗಾವಣೆ ಕಾನೂನಿನಡಿಯಲ್ಲಿ ಫ್ರಾನ್ಸ್ ನಲ್ಲಿ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.
ವಿಜಯ್ ಮಲ್ಯ
ವಿಜಯ್ ಮಲ್ಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಕಾನೂನಿನಡಿಯಲ್ಲಿ ಫ್ರಾನ್ಸ್ ನಲ್ಲಿ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

ಮನವಿ ಮೇರೆಗೆ ಫ್ರಾನ್ಸ್ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು, 32 ಅವಿನ್ಯೂ ಪೊಚ್ ನಲ್ಲಿದ್ದ 1.6 ಮಿಲಿಯನ್ ಯುರೋ ಅಂದರೆ 14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರಿಯ ತನಿಖಾ ಏಜೆನ್ಸಿ ಮಾಹಿತಿ ನೀಡಿದೆ.

ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ವಿಚಾರಣೆ ನಡೆಸಲಾಗಿದ್ದು, ಕಿಂಗ್ ಫಿಶರ್ ಏರ್ ಲೈನ್ಸ್ ಲಿಮಿಟೆಡ್ ಬ್ಯಾಂಕ್ ಖಾತೆಯಿಂದ ಹೆಚ್ಚಿನ ಮೊತ್ತದ ಹಣವನ್ನು ವಿದೇಶಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ. ಬ್ಯಾಂಕ್ ಗಳಿಗೆ 9 ಸಾವಿರ ರೂ. ಸಾಲ ಮರುಪಾವತಿಸದೆ 2016 ಮಾರ್ಚ್ ನಿಂದ ಇಂಗ್ಲೆಂಡ್ ನಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com