ಕೊರೋನ ಲಸಿಕೆ ವಿತರಣೆ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

ಕೊರೋನಾ ಸೋಂಕು ನಿವಾರಣಾ ಲಸಿಕೆ ವಿತರಣೆ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸೋಂಕು ನಿವಾರಣಾ ಲಸಿಕೆ ವಿತರಣೆ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ.

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಇಂದು ವರ್ಚುವಲ್ ಸಭೆ ನಡೆಯಲಿದ್ದು, ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ವಿವಿಧ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಈಗಾಗಲೇ ಸಭೆ ಮಾಡಿದ್ದು ತದನಂತರ ಈಗ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ.

ಪ್ರಧಾನಿ ಮೋದಿಯವರ ಜೊತೆಗೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ಥವಾರ್ ಚಾಂಗ್ ಗೆಹ್ಲೋಟ್, ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಭಾಗಿಯಾಗುವ ಸಾಧ್ಯತೆಗಳಿವೆ. 

ಸಭೆಯಲ್ಲಿ ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಯಾವೆಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ವಿದೇಶಗಳು ಹಾಗೂ ಭಾರತದಲ್ಲಿ ತೆಗೆದುಕೊಂಡಿರುವ ಶಿಸ್ತುಕ್ರಮಗಳ ಕುರಿತು ಆರೋಗ್ಯ ಕಾರ್ಯದರ್ಶಿಗಳು 15-20 ನಿಮಿಷಗಳ ಕಾಲ ಮಾಹಿತಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಕೊರೋನಾ ಸಾಂಕ್ರಾಮಿಕ ಪಿಡುಗಿನ ಆರಂಭದಿಂದ ಕೇಂದ್ರ ಸರ್ಕಾರ ನಡೆಸುತ್ತಿರುವ 2ನೇ ಸರ್ವಪಕ್ಷ ಸಭೆ ಇದಾಗಿದೆ. ಭಾರತದಲ್ಲಿ ಕೊರೋನಾ ಲಾಕ್ಡೌನ್ ಜಾರಿಗೊಳಿಸುವುದಕ್ಕೂ ಮೊದಲು ಕಳೆದ ಏಪ್ರಿಲ್ ನಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com