ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸ್ಥಿರತೆಯ ಕೊರತೆಯಿದೆ: ಶರದ್ ಪವಾರ್ 

ರಾಷ್ಟಮಟ್ಟದ ನಾಯಕನಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಲ್ಲಿ ಸ್ವಲ್ಪಮಟ್ಟಿಗೆ ಸ್ಥಿರತೆಯ ಕೊರತೆ ಕಾಣಿಸುತ್ತಿದೆ ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಪುಣೆ: ರಾಷ್ಟಮಟ್ಟದ ನಾಯಕನಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಲ್ಲಿ ಸ್ವಲ್ಪಮಟ್ಟಿಗೆ ಸ್ಥಿರತೆಯ ಕೊರತೆ ಕಾಣಿಸುತ್ತಿದೆ ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಮಾತ ಮೀಡಿಯಾ ಅಧ್ಯಕ್ಷ ಮತ್ತು ಮಾಜಿ ಸಂಸದ ವಿಜಯ್ ದರ್ದಾ, ಶರದ್‌ ಪವಾರ್‌ ಅವರನ್ನು ಸಂದರ್ಶಿಸಿದ ವೇಳೆ ಪವಾರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ದೇಶ ರಾಹುಲ್‌ ಗಾಂಧಿ ಅವರ ನಾಯಕತ್ವವನ್ನು ಒಪ್ಪಲು ಸಿದ್ಧವಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪವಾರ್‌, ಈ ವಿಷಯದಲ್ಲಿ ಕೆಲವು ಪ್ರಶ್ನೆಗಳಿವೆ. ಅವರಿಗೆ ಸ್ಥಿರತೆಯ ಕೊರತೆ ಇದೆ ಎಂದು ಕಾಣುತ್ತದೆ ಎಂದು ಹೇಳಿದ್ದಾರೆ.

'ನಮ್ಮ ದೇಶದ ನಾಯಕತ್ವದ ಬಗ್ಗೆ ನಾನು ಏನು ಬೇಕಾದರೂ ಹೇಳಬಲ್ಲೆ. ಆದರೆ ಬೇರೆ ದೇಶದ ನಾಯಕತ್ವದ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರೂ ಆ ಮಿತಿಯನ್ನು ಕಾಯ್ದುಕೊಳ್ಳಬೇಕು. ಒಬಾಮಾ ಆ ಮಿತಿಯನ್ನು ಮೀರಿದ್ದಾರೆ ಎಂದು ನಾನು ಭಾವಿಸುತ್ತೇನೆ' ಎಂದು ಅವರು ಹೇಳಿದರು.

'ಕಾಂಗ್ರೆಸ್ ನಾಯಕನು ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿರುವ ವಿದ್ಯಾರ್ಥಿಯಂತೆ ಕಾಣಿಸುತ್ತಾರೆ. ಆದರೆ, ವಿಷಯವನ್ನು ಕರಗತ ಮಾಡಿಕೊಳ್ಳುವ ಉತ್ಸಾಹ ಅವರಲ್ಲಿಲ್ಲ,' ಎಂದು ಒಬಾಮಾ ತಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶರದ್‌ ಪವಾರ್‌, 'ಎಲ್ಲರ ದೃಷ್ಟಿಕೋನವನ್ನು ಒಪ್ಪಲೇಬೇಕು ಎಂಬ ಅಗತ್ಯವೇನೂ ಇಲ್ಲ,' ಎಂದು ಹೇಳಿದ್ದಾರೆ.

ನಾನು ಸೋನಿಯಾ ಗಾಂಧಿ ಮತ್ತು ಕುಟುಂಬದೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಆದರೆ, ಕಾಂಗ್ರೆಸ್ಸಿಗರಿಗೆ ಗಾಂಧಿ-ನೆಹರೂ ಕುಟುಂಬದ ಬಗ್ಗೆ ಪ್ರೀತಿಯ ಭಾವನೆ ಇದೆ ಎಂದು ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com