ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ: ಪ್ರಧಾನಿ ಮೋದಿ

ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Published: 04th December 2020 11:39 PM  |   Last Updated: 04th December 2020 11:39 PM   |  A+A-


PM_Modi1

ಪ್ರಧಾನಿ ನರೇಂದ್ರ ಮೋದಿ

Posted By : Nagaraja AB
Source : The New Indian Express

ನವದೆಹಲಿ: ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಐಐಟಿ 2020 ಜಾಗೃತಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪ್ರಗತಿ, ದಕ್ಷತೆ ಹಾಗೂ ಪಾರದರ್ಶಕತೆಯ ತ್ವತ್ವಗಳಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಪ್ರಗತಿಯಿಂದ ಯಾವುದೇ ಕ್ಷೇತ್ರ ಹಿಂದೆ ಬಿದ್ದಿಲ್ಲ. ಕೃಷಿ, ಪರಮಾಣು ಶಕ್ತಿ, ಇಂಧನ, ರಕ್ಷಣೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಹಣಕಾಸು, ಬ್ಯಾಂಕಿಂಗ್, ತೆರಿಗೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಕಾಣುತ್ತಿರುವುದಾಗಿ ಹೇಳಿದರು. 

ಕಾರ್ಮಿಕ ವಲಯದಲ್ಲಿ ಗಮನಾರ್ಹ ರೀತಿಯಲ್ಲಿ ಸುಧಾರಣೆಯಾಗಿದೆ. 44 ಕೇಂದ್ರ ಕಾರ್ಮಿಕ ಕಾನೂನುಗಳನ್ನು ನಾಲ್ಕು ಸಂಕೇತಗಳಲ್ಲಿ ಒಟ್ಟುಗೂಡಿಸಲಾಗಿದೆ. ನಮ್ಮ ಕಾರ್ಪೋರೇಟ್ ತೆರಿಗೆ ವಿಶ್ವದಲ್ಲಿಯೇ ಅತ್ಯಂತ ಕಡಿಮೆಯಾಗಿದೆ ಎಂದರು.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಹೂಡಿಕೆಯಾಗಿದೆ. ಇದರಲ್ಲಿ ತಂತ್ರಜ್ಞಾನ ಕ್ಷೇತ್ರದಿಂದಲೇ ಅಪಾರ ಪ್ರಮಾಣದ ಹೂಡಿಕೆಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp