ವಿನ್ಯಾಸಗಾರ ಅನ್ವಯ್ ನಾಯಕ್ ಆತ್ಮಹತ್ಯೆ ಬೆದರಿಕೆಯನ್ನು ಆರೋಪಿಗಳು ನಿರ್ಲಕ್ಷಿಸಿದ್ದರು: ಚಾರ್ಜ್‌ಶೀಟ್

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ.

Published: 05th December 2020 06:39 PM  |   Last Updated: 05th December 2020 06:39 PM   |  A+A-


arnab goswami

ಅರ್ನಬ್ ಗೋಸ್ವಾಮಿ

Posted By : Vishwanath S
Source : PTI

ಮುಂಬೈ: ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ. 

ಆರೋಪಿಯು ಬಾಕಿ ಹಣ ಪಾವತಿಸದ ಕಾರಣ ಮಾನಸಿಕ ಒತ್ತಡದಲ್ಲಿದ್ದ ಅನ್ವಯ್ ನಾಯಕ್, ಮೊದಲು ತನ್ನ ತಾಯಿ ಕುಮುದಾ ಅವರ  ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆತ್ಮಹತ್ಯೆ ಪತ್ರ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ನಮೂದಿಸಲಾಗಿದೆ.

ಒಳಾಂಗಣ ವಿನ್ಯಾಸಗಾರ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೆರೆಯ ರಾಯಗಡ್ ಜಿಲ್ಲೆಯ ಅಲಿಬಾಗ್ ನ್ಯಾಯಾಲಯದಲ್ಲಿ ನಿನ್ನೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಚಾರ್ಜ್‌ಶೀಟ್‌ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಇತರ ಇಬ್ಬರು ಆರೋಪಿಗಳಾದ ಫಿರೋಜ್ ಶೇಖ್ ಮತ್ತು ನಿತೀಶ್ ಸರ್ದಾ ಅವರ ಹೆಸರನ್ನು ಸೇರಿಸಲಾಗಿದೆ. ಇನ್ನು 65 ಮಂದಿಯ ಹೆಸರನ್ನು ಸಾಕ್ಷಿಯನ್ನಾಗಿ ನಮೂದಿಸಲಾಗಿದೆ.

"ಬಾಕಿ ಹಣ ಪಾವತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅನ್ವಯ್ ಹೇಳಿದ್ದರೂ ಆರೋಪಿಗಳು ಅವರ ಬೆದರಿಕೆಯನ್ನು ನಿರ್ಲಕ್ಷಿಸಿ ನಿನಗೆ ಏನು ಬೇಕೋ ಅದನ್ನು ಮಾಡಿಕೋ ಎಂದು ಹೇಳಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಆರೋಪಿ ಮೂವರ ಮೇಲೆ ಐಪಿಸಿ ಸೆಕ್ಷನ್‌ಗಳು 306 (ಆತ್ಮಹತ್ಯೆಗೆ ಪ್ರಚೋದನೆ), 109 (ಅಪರಾಧಕ್ಕೆ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp