'ದೆಹಲಿ ಚಲೋ' ಪ್ರತಿಭಟನೆ ತೀವ್ರ: ರೈತರು-ಸರ್ಕಾರದ ನಡುವೆ ಇಂದು 5ನೇ ಸುತ್ತಿನ ಮಾತುಕತೆ

ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಸಜ್ಜಾಗಿದ್ದು, ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

Published: 05th December 2020 08:12 AM  |   Last Updated: 05th December 2020 12:43 PM   |  A+A-


Visuals from Singhu border

ಸಿಂಘು ಗಡಿಯಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯ

Posted By : Sumana Upadhyaya
Source : ANI

ನವದೆಹಲಿ: ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಸಜ್ಜಾಗಿದ್ದು, ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. 

ಇಂದು ಸಿಂಘು ಗಡಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘಟನೆಗಳ ಮುಖಂಡರು, ಹೊಸ ಕೃಷಿ ಕಾಯಿದೆಗಳ ಬಗ್ಗೆ ನಮಗೆ ತೃಪ್ತಿ ಇಲ್ಲ. ಇತ್ತೀಚಿಗೆ ಜಾರಿಗೆ ತಂದ ಮೂರು ಕಾಯಿದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು 5ನೇ ಸುತ್ತಿನ ಮಾತುಕತೆ ನಡೆಯಲಿದ್ದು ರೈತರು ಸಿಂಘು ಗಡಿಯಲ್ಲಿ ಇಂದು ಬೆಳಗಿನ ಜಾವದಿಂದಲೇ ಪ್ರತಿಭಟನೆ ಮುಂದುವರಿಸಿದ್ದಾರೆ. 

ದೆಹಲಿ ಹರ್ಯಾಣದ ಜಟಿಕಾರಾ ಗಡಿಭಾಗವನ್ನು ದ್ವಿಚಕ್ರ ವಾಹನ ಸಂಚಾರರಿಗೆ ಮಾತ್ರ ಮುಕ್ತಗೊಳಿಸಲಾಗಿದೆ. ಸದ್ಯ ಹರ್ಯಾಣದ ಗಡಿಭಾಗಗಳಾದ ದನ್ಸ, ದೌರಾಲಾ, ಕಪಶೆರಾ, ರಾಜೊಕ್ರಿ ರಾಷ್ಟ್ರೀಯ ಹೆದ್ದಾರಿ-8, ಬಿಜ್ವಸಾನ್/ಬಜ್ ಘೆರಾ, ಪಲಾಮಾ ವಿಹಾರ್ ಮತ್ತು ದುಂಡಹೆರಾ ಗಡಿಗಳು ಸಂಚಾರಕ್ಕೆ ಮುಕ್ತವಾಗಿವೆ ಎಂದು ದೆಹಲಿ ಸಂಚಾರ ಪೊಲೀಸರು ತಿಳಿಸಿದ್ದಾರೆ. 

ನೊಯ್ಡಾದಿಂದ ದೆಹಲಿಗೆ ಹೋಗುವ ಚಿಲ್ಲ ಗಡಿಯನ್ನು ರೈತರು ಗೌತಮ್ ಬುದ್ಧ ದ್ವಾರ ಬಳಿ ಪ್ರತಿಭಟನೆ ನಡೆಸುತ್ತಿರುವುದರಿಂದ ಮುಚ್ಚಲಾಗಿದೆ. ದೆಹಲಿಗೆ ಆಗಮಿಸುವವರು ನೊಯ್ದಾ ಸಂಪರ್ಕ ರಸ್ತೆಯಲ್ಲಿ ಬಾರದಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. 
ಇನ್ನು ಗಜಿಪುರ್ ಗಡಿಯನ್ನು ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಗಜಿಯಾಬಾದ್ ನಿಂದ ದೆಹಲಿಗೆ ಬರುವ ಮಾರ್ಗವನ್ನು ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಚ್ಚಲಾಗಿದೆ.

ಈ ಮಧ್ಯೆ ತಮ್ಮ ಹೋರಾಟವನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು ಇಂದಿನ ಮಾತುಕತೆ ವಿಫಲವಾದರೆ ನಾಡಿದ್ದು ಡಿಸೆಂಬರ್ 8ರಂದು ಭಾರತ ಬಂದ್ ಗೆ ಕರೆ ನೀಡಿವೆ. ಇಂದಿನ 5ನೇ ಸುತ್ತಿನ ಮಾತುಕತೆ ಫಲಪ್ರದವಾಗದಿದ್ದರೆ ಸಂಸತ್ತಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. 

ರೈತರು ಪ್ರತಿಭಟನೆ ಹಿಂಪಡೆಯುವ ವಿಶ್ವಾಸವಿದೆ: ಇಂದು ಬೆಳಗ್ಗೆ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್, ಇಂದು ಮಧ್ಯಾಹ್ನ 2 ಗಂಟೆಗೆ ರೈತ ಪ್ರತಿನಿಧಿಗಳ ಜೊತೆ ಮತ್ತೊಂದು ಸುತ್ತಿನ ಸಭೆಯಿದೆ. ರೈತರು ಸಕಾರಾತ್ಮಕವಾಗಿ ಸ್ಪಂದಿಸಿ ಪ್ರತಿಭಟನೆ ಹಿಂಪಡೆಯುತ್ತಾರೆ ಎಂದು ಭಾವಿಸುತ್ತೇನೆ ಎಂದರು. 

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp