ರೈತರ ಪ್ರತಿಭಟನೆ ಬೆಂಬಲಿಸಿ ಪಂಜಾಬ್‌ ಮಾಜಿ ಕ್ರೀಡಾಪಟುಗಳಿಂದ ಪ್ರಶಸ್ತಿ ವಾಪಸ್

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತರು ಸೇರಿದಂತೆ ಪಂಜಾಬ್‌ನ ಹಲವು ಮಾಜಿ ಕ್ರೀಡಾಪಟುಗಳು..
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತರು ಸೇರಿದಂತೆ ಪಂಜಾಬ್‌ನ ಹಲವು ಮಾಜಿ ಕ್ರೀಡಾಪಟುಗಳು ಶನಿವಾರ ದೆಹಲಿಗೆ ತೆರಳಿದ್ದು, ನಾಳೆ ತಮ್ಮ ಪ್ರಶಸ್ತಿಗಳನ್ನು ವಾಪಸ್ ಸರ್ಕಾರಕ್ಕೆ ನೀಡಲಿದ್ದಾರೆ.

ರಾಷ್ಟ್ರಪತಿಗಳಿಗೆ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸುವ ಮೊದಲು ಮಾಜಿ ಕ್ರೀಡಾಪಟುಗಳು ಇಂದು ರಾಷ್ಟ್ರ ರಾಜಧಾನಿಯ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರೊಂದಿಗೆ ಸೇರಿಕೊಳ್ಳಲಿದ್ದಾರೆ.

"ನಾವು ಇಂದು ದೆಹಲಿಗೆ ತೆರಳುತ್ತಿದ್ದು, ರೈತರ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ" ಎಂದು ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಮಾಜಿ ಕುಸ್ತಿಪಟು ಕರ್ತಾರ್ ಸಿಂಗ್ ಅವರು ಹೇಳಿದ್ದಾರೆ.

"ಆರೋಗ್ಯ ಅಥವಾ ಇತರ ಸಮಸ್ಯೆಗಳಿಂದಾಗಿ ಸಜ್ಜನ್ ಸಿಂಗ್ ಚೀಮಾ ಸೇರಿದಂತೆ ಹಲವು ಮಾಜಿ ಕ್ರೀಡಾಪಟುಗಳು ನಮ್ಮೊಂದಿಗೆ ಬರಲು ಸಾಧ್ಯವಾಗಿಲ್ಲ. ಆದರೆ ಅವರು ತಮ್ಮ ಕ್ರೀಡಾ ಪ್ರಶಸ್ತಿಗಳನ್ನು ನಮಗೆ ನೀಡಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

ನಾವು ಪ್ರಶಸ್ತಿಗಳನ್ನು ಹಿಂದಿರುಗಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಸಮಯ ಸಮಯ ಕೇಳಿದ್ದೇವೆ. ಒಂದು ವೇಳೆ ರಾಷ್ಟ್ರಪತಿ ಭೇಟಿಗೆ ನಮಗೆ ಸಮಯ ನೀಡದಿದ್ದರೆ ನಾವು ನಾಳೆ ನಮ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ಭವನದ ಮುಂದೆ ಇಟ್ಟು ಬರುತ್ತೇವೆ ಎಂದು ಮಾಜಿ ಹಾಕಿ ಆಟಗಾರ ರಾಜ್ ಬಿರ್ ಕೌರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com