ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.
ವಿಜ್ಞಾನ ಭವನದಲ್ಲಿ ರೈತ ಮುಖಂಡರು
ವಿಜ್ಞಾನ ಭವನದಲ್ಲಿ ರೈತ ಮುಖಂಡರು

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ರೈತರ ಪ್ರತಿಭಟನೆ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಯಿತು.

ಈ ವೇಳೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸೌಹಾರ್ದಯುತ ಮಾತುಕತೆಗೆ ಸರ್ಕಾರ ಬದ್ಧವಾಗಿದೆ ಮತ್ತು ಹೊಸ ಕೃಷಿ ಕಾನೂನುಗಳ ಬಗ್ಗೆ ಎಲ್ಲಾ ಸಕಾರಾತ್ಮಕ ಸಲಹೆಗಳನ್ನು ಸ್ವಾಗತಿಸುತ್ತದೆ ಎಂದು ರೈತ ಸಂಘಟನೆಗಳ ಪ್ರತಿನಿಧಿಗಳಿಗೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ನಂತರ ಪಂಜಾಬಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು, "ನಿಮ್ಮ ಎಲ್ಲ ಸಮಸ್ಯೆಗಳನ್ನು ಮುಕ್ತ ಮನಸ್ಸಿನಿಂದ ಪರಿಹರಿಸಲು ನಾವು ಸಿದ್ಧರಿದ್ದೇವೆ" ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com