ಅಯೋಧ್ಯೆಯ ಮಸೀದಿ ನಿರ್ಮಾಣ ಟ್ರಸ್ಟ್ ನಲ್ಲಿ ಸರ್ಕಾರಿ ಪ್ರತಿನಿಧಿಗಳ ನಾಮ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ನಕಾರ
ಅಯೋಧ್ಯೆಯ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ರಚಿಸಿರುವ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
Published: 05th December 2020 12:09 AM | Last Updated: 05th December 2020 12:42 PM | A+A A-

ಸುಪ್ರೀಂಕೋರ್ಟ್
ನವದೆಹಲಿ: ಅಯೋಧ್ಯೆಯ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ರಚಿಸಿರುವ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
ವಕೀಲರಾದ ಶಿಶಿರ್ ಚತುರ್ವೇದಿ ಮತ್ತು ಕೆಕೆ ಶುಕ್ಲಾ ಸಲ್ಲಿಸಿದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ಮತ್ತು ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು.
ಅರ್ಜಿದಾರರು ರಾಮ ಮಂದಿರ ಟ್ರಸ್ಟ್ ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಗೆ ಸೇರಿಸುವಂತೆ ಅರ್ಜಿದಾರರು ಕೋರಿದ್ದರು.