ನಮಗೆ ಟಿಎಂಸಿಯ 'ಸಹಜ ಅವನತಿ' ಬೇಕು, ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಬಯಸಲ್ಲ: ಬಿಜೆಪಿ

ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಸಹಜ ಅವನತಿ ಬೇಕೆ ಹೊರತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯನ್ನು ಬಯಸುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಸಮಿಕ್ ಭಟ್ಟಾಚಾರ್ಯ ಅವರು ಹೇಳಿದ್ದಾರೆ. 
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಸಹಜ ಅವನತಿ ಬೇಕೆ ಹೊರತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯನ್ನು ಬಯಸುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಸಮಿಕ್ ಭಟ್ಟಾಚಾರ್ಯ ಅವರು ಹೇಳಿದ್ದಾರೆ. 

"ಪಶ್ಚಿಮ ಬಂಗಾಳದಲ್ಲಿ ಆರ್ಟಿಕಲ್ 356(ರಾಷ್ಟ್ರಪತಿ ಆಡಳಿತ) ನಮಗೆ ಬೇಡ. 356ನೇ ವಿಧಿಯನ್ನು ಬೇಕು ಅನ್ನುತ್ತಿರುವುದು ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷ. ನಾವು ಟಿಎಂಸಿಯ ಸ್ವಾಭಾವಿಕ ಅವನತಿಯನ್ನು ಬಯಸುತ್ತೇವೆ. 2021ರಲ್ಲಿ ಬಂಗಾಳದ ಜನರು ತೀವ್ರವಾಗಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಭಟ್ಟಾಚಾರ್ಯ ಹೇಳಿದರು.

ಈ ಹಿಂದೆ ಬಿಜೆಪಿ ಸಂಸದ ಸೌಮಿತ್ರಾ ಖಾನ್, ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯಪಾಲ ಜಗದೀಪ್ ಧಂಕರ್ ಅವರು ಕೇಳುವ ಸಾಧ್ಯತೆಯಿದೆ ಎಂದು ಹೇಳಿದ್ದರು.

"ರಾಜ್ಯಪಾಲರು ಇದ್ದಕ್ಕಿದ್ದಂತೆ 149 ಸ್ಥಾನಗಳನ್ನು(ಬಹುಮತ) ಸಾಬೀತುಪಡಿಸಿ ಎಂದು ಮುಖ್ಯಮಂತ್ರಿಯನ್ನು ಕೇಳಬಹುದು ಖಾನ್ ನವೆಂಬರ್ 28ರಂದು ಕಾರ್ಯಕ್ರಮವೊಂದರಲ್ಲಿ ಕೇಳಿದ್ದರು. 

ಕೆಳ ತಿಂಗಳುಗಳಿಂದ ಧಂಕರ್ ಹಲವಾರು ವಿಷಯಗಳ ಬಗ್ಗೆ ಬ್ಯಾನರ್ಜಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಧಂಕರ್ ಅವರು ರಾಜ್ಯದಲ್ಲಿ "ಸಮಾನಾಂತರ ಆಡಳಿತ" ನಡೆಸುತ್ತಿದ್ದಾರೆ ಎಂದು ಬ್ಯಾನರ್ಜಿ ಈ ಹಿಂದೆ ಆರೋಪಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಆಳವಾಗಿ ಬೇರೂರಿದೆ. 2021ರ ವಿಧಾನಸಭಾ ಚುನಾವಣೆಗೂ ಮುನ್ನ ಹಲವಾರು ಟಿಎಂಸಿ ನಾಯಕರು ಬಿಜೆಪಿಗೆ ಸೇರಿದ್ದಾರೆ ಎಂದಿದ್ದರು.

2016ರಲ್ಲಿ ತೃಣಮೂಲ ಕಾಂಗ್ರೆಸ್ 294 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಒಟ್ಟು 211 ಸ್ಥಾನಗಳನ್ನು ಗಳಿಸಿದ್ದರೆ, ಬಿಜೆಪಿಗೆ ಕೇವಲ ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com