ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಪೊಲೀಸ್, ನಾಗರಿಕರಿಗೆ ಗಾಯ 

 ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಶ್ರೀನಗರದಲ್ಲಿ ಭಾನುವಾರ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ನಾಗರಿಕರೊಬ್ಬರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹವಾಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಹವಾಲಾ ಚೌಕಾದಲ್ಲಿ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಪೊಲೀಸ್ ಹಾಗೂ ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶವನ್ನು ಪೊಲೀಸರು ಸುತ್ತುವರಿದಿರುವುದಾಗಿ ಅವರು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com