ಮಹಾಪರಿನಿರ್ವಾಣ ದಿನ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ನೆನೆದ ಪ್ರಧಾನಿ ಹಾಗೂ ಇತರ ನಾಯಕರು 

ಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶದ ಗಣ್ಯರು, ರಾಜಕೀಯ ನಾಯಕರು, ಶ್ರೀಮಾನ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಿದ್ದಾರೆ. 
ಡಾ ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರ
ಡಾ ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರ

ನವದೆಹಲಿ: ಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶದ ಗಣ್ಯರು, ರಾಜಕೀಯ ನಾಯಕರು, ಶ್ರೀಮಾನ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಿದ್ದಾರೆ. 

ಮುಂಬೈಯ ದಾದಾರ್ ನ ಚೈತ್ಯಭೂಮಿಯಲ್ಲಿ ಜನರು ಸಾಲಿನಲ್ಲಿ ನಿಂತು ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಿ ಮಹಾನ್ ಚೇತನಕ್ಕೆ ಗೌರವ ಸಲ್ಲಿಸುತ್ತಿದ್ದಾರೆ.

ಮಹಾಪರಿನಿರ್ವಾಣ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್ ಅವರನ್ನು ನೆನೆಸಿಕೊಂಡಿದ್ದಾರೆ. ಅಂಬೇಡ್ಕರ್ ಅವರ ಆಲೋಚನೆ ಮತ್ತು ಅಭಿಪ್ರಾಯಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತದೆ. ನಮ್ಮ ದೇಶದ ಬಗ್ಗೆ ಇಟ್ಟಿರುವ ಕನಸನ್ನು ಈಡೇರಿಸಲು ನಾವು ಬದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬಾಬಾಸಾಹೇಬ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಮೋದಿ ಸರ್ಕಾರ ಸಮಾಜದ ಏಳಿಗೆಗಾಗಿ, ದಶಕಗಳಿಂದ ತುಳಿತಕ್ಕೊಳಗಾದವರ ಅಭಿವೃದ್ಧಿಗಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದಿದ್ದಾರೆ.

ಮಹಾಪರಿನಿರ್ವಾಣ ದಿನ: ಡಾ ಬಿ ಆರ್ ಅಂಬೇಡ್ಕರ್ ಅವರು ನಿಧನ ಹೊಂದಿದ ದಿನ ಪ್ರತಿವರ್ಷ ಡಿಸೆಂಬರ್ 6ನ್ನು ಮಹಾಪರಿನಿರ್ವಾಣ ದಿವಸವೆಂದು ಆಚರಿಸಲಾಗುತ್ತದೆ. ಭಾರತ ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರು ಒಬ್ಬ ಖ್ಯಾತ ನ್ಯಾಯವಾದಿ,ಆರ್ಥಿಕ ತಜ್ಞ, ರಾಜಕೀಯ ಮತ್ತು ಸಮಾಜ ಸುಧಾರಕರಾಗಿ ಕೂಡ ಗುರುತಿಸಿಕೊಂಡಿದ್ದರು, ದೇಶದಲ್ಲಿ ದಲಿತ ಬೌದ್ಧ ಚಳವಳಿಗಳು, ಮಹಿಳೆಯರು, ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದರು.

ಬೌದ್ಧ ಧರ್ಮದಲ್ಲಿ ಪರಿನಿರ್ವಾಣ ಎಂದರೆ ತೀರಿಹೋದ ನಂತರ ನಿರ್ವಾಣವಾಗುವುದು, ಜೀವಿತಾವಧಿಯಲ್ಲಿ ನಿರ್ವಾಣವನ್ನು ಪಡೆದವರು ಎಂದರ್ಥ. ಅಂದರೆ ಈ ಭೌತಿಕ ಜಗತ್ತಿನಿಂದ, ಕರ್ಮ ಮತ್ತು ಮರುಹುಟ್ಟಿನಿಂದ ಬಿಡುಗಡೆ ಹೊಂದುವುದು ಎಂದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com