ಸುಶಾಂತ್ ಸಿಂಗ್ ನಿಧನ ಬಳಿಕ ತಲೆಮರೆಸಿಕೊಂಡಿದ್ದ ಡ್ರಗ್ ದಂಧೆ ಆರೋಪಿ ಬಂಧನ: 2.5 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ ಕೇಸಿನಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬಂಧಿಸಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮುಂಬೈಯಲ್ಲಿ ವಶಪಡಿಸಿಕೊಂಡಿದ್ದಾರೆ.
ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್
ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ ಕೇಸಿನಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬಂಧಿಸಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮುಂಬೈಯಲ್ಲಿ ವಶಪಡಿಸಿಕೊಂಡಿದ್ದಾರೆ.

ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ ವಶಪಡಿಸಿಕೊಳ್ಳಲಾಗಿರುವ ಡ್ರಗ್ ಗಳಲ್ಲಿ ಇದು ಅತಿ ದೊಡ್ಡದಾಗಿದೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ರೆಗೆಲ್ ಮಹಾಕಲ್ ಎಂದು ಗುರುತಿಸಲಾಗಿದ್ದು, ನಿನ್ನೆ ತಡರಾತ್ರಿ ಈತನನ್ನು ಬಂಧಿಸಲಾಗಿದೆ. ಮುಂಬೈಯ ಲೋಖಂಡವಾಲಾದಲ್ಲಿ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ನೇತೃತ್ವದಲ್ಲಿ ನಿನ್ನೆ ದಾಳಿ ನಡೆಸಲಾಗಿತ್ತು.
ಮಲಾನಾ ಕ್ರೀಮ್ ಎಂಬ ನಿಷಿದ್ಧ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು ಅದರ ಮೌಲ್ಯ ಸುಮಾರು 2.5 ಕೋಟಿ ರೂಪಾಯಿಗಳಾಗಿವೆ, ಇನ್ನು ಕೂಡ ದಾಳಿ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆಯ ದಾಳಿ ವೇಳೆ ಮತ್ತೊಬ್ಬನನ್ನು ಕೂಡ ಬಂಧಿಸಲಾಗಿದ್ದು ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ.

ಈ ಹಿಂದೆ ಹಲವು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದ ವೇಳೆ ಮಹಕಲ್ ನ ಹೆಸರು ಬಂದಿತ್ತು. ಈತ ಕಳೆದ ಸೆಪ್ಟೆಂಬರ್ ನಲ್ಲಿ ಸಿಕ್ಕಿಬಿದ್ದಿದ್ದ ಅನುಜ್ ಕೇಶವಾನಿಗೆ ಅಕ್ರಮವಾಗಿ ಡ್ರಗ್ ಪೂರೈಸುತ್ತಿದ್ದ ಎಂದು ತಿಳಿದುಬಂದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಮೃತದೇಹ ಕಳೆದ ಜೂನ್ 7ರಂದು ಮುಂಬೈಯ ಬಾಂದ್ರಾದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಇದಾದ ಬಳಿಕ ತನಿಖೆ ವೇಳೆ ಬಾಲಿವುಡ್ ನ ಹಲವು ನಟ, ನಟಿಯರಿಗೆ ಡ್ರಗ್ ಜಾಲದ ಸಂಪರ್ಕವಿರುವುದು ಬಹಿರಂಗವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com