ಪುಲ್ವಾಮ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಅಲ್-ಬದ್ರೆ ಸ್ಥಳೀಯ ಉಗ್ರಗಾಮಿ ಸಂಘಟನೆಯ 3 ಉಗ್ರರು ಹತ, ನಾಗರಿಕನಿಗೆ ಗಾಯ 

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಅಲ್ ಬದ್ರೆ ಎಂಬ ಸ್ಥಳೀಯ ಭಯೋತ್ಪಾದಕ ಗುಂಪಿನ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಅಲ್ ಬದ್ರೆ ಎಂಬ ಸ್ಥಳೀಯ ಭಯೋತ್ಪಾದಕ ಗುಂಪಿನ ಮೂವರು ಉಗ್ರಗಾಮಿಗಳು ಹತರಾಗಿದ್ದಾರೆ.

ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಇಂದು ನಸುಕಿನ ಜಾವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.ಇದರಲ್ಲಿ ಸ್ಥಳೀಯ ನಾಗರಿಕರೊಬ್ಬರಿಗೆ ಗಾಯವಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಸದ್ಯ ಗಾಯಗೊಂಡ ನಾಗರಿಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಯಾವುದಾದರೂ ಹಳೆಯ, ಬಳಸದೇ ಇರುವ ಗ್ರೆನೇಡ್ ಬಾಕಿ ಉಳಿದಿದೆಯೇ ಎಂದು ಪ್ರದೇಶಗಳನ್ನು ತಪಾಸಣೆ ಮಾಡುತ್ತಿದ್ದೇವೆ ಎಂದು ಪುಲ್ವಾಮಾ ಎನ್ ಕೌಂಟರ್ ಬಗ್ಗೆ ಮಾಹಿತಿ ನೀಡಿದರು.

ಇನ್ನೊಂದೆಡೆ ಜಮ್ಮು-ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಕೂಡ ಇಂದು ಗ್ರೆನೇಡ್ ದಾಳಿ ನಡೆದಿದ್ದು ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಬೆಂಗಾವಲು ರಾಷ್ಟ್ರೀಯ ಹೆದ್ದಾರಿಯ ಮೂಲಕ ಹಾದುಹೋಗುವಾಗ ಓವರ್ ಗ್ರೌಂಡ್ ವರ್ಕರ್ ಸಿಂಗ್ಪೊರಾದಲ್ಲಿ ಗ್ರೆನೇಡ್ ಎಸೆದು ನಾಗರಿಕರು ಗಾಯಗೊಂಡಿದ್ದಾರೆ. 

ಈ ದಾಳಿಯ ಹಿಂದಿನ ಪಡೆಯನ್ನು ಗುರುತಿಸಿ ಸದ್ಯದಲ್ಲಿಯೇ ಬಂಧಿಸಲಾಗುವುದು ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com