ವಿಪಕ್ಷ ನಾಯಕರ ನಿಯೋಗದಿಂದ ರಾಷ್ಟ್ರಪತಿ ಭೇಟಿ: ನೂತನ ಕೃಷಿ ಕಾಯ್ದೆ ರದ್ದತಿಗೆ ಮನವಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶರದ್ ಪವಾರ್ ಮತ್ತು ಎಡ ಪಕ್ಷಗಳ ಮುಖಂಡರು ಸೇರಿದಂತೆ ವಿರೋಧ ಪಕ್ಷಗಳ ನಿಯೋಗ ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮನವಿ ಮಾಡಿದೆ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸು
ವಿಪಕ್ಷ ನಾಯಕರ ನಿಯೋಗದಿಂದ ರಾಷ್ಟ್ರಪತಿ ಭೇಟಿ: ನೂತನ ಕೃಷಿ ಕಾಯ್ದೆ ರದ್ದತಿಗೆ ಮನವಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶರದ್ ಪವಾರ್ ಮತ್ತು ಎಡ ಪಕ್ಷಗಳ ಮುಖಂಡರು ಸೇರಿದಂತೆ ವಿರೋಧ ಪಕ್ಷಗಳ ನಿಯೋಗ ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮನವಿ ಮಾಡಿದೆ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕರ ಐದು ಸದಸ್ಯರ ನಿಯೋಗ ಇಂದು ರಾಷ್ಟ್ರಪತಿಯವರನ್ನು ಭೇಟಿಯಾಗಿದ್ದು ನಿಯೋಗದಲ್ಲಿ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಮತ್ತು ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್, ರಾಹುಲ್ ಗಾಂಧಿ ಹಾಗೂ ಶರದ್ ಪವಾರ್ ಇದ್ದಾರೆ.

"ನಾವು ರಾಷ್ಟ್ರಪತಿಗಳನ್ನು ಭೇಟಿಯಾಗಿ ಮೂರು ಕೃಷಿ ಕಾನೂನುಗಳ ಬಗ್ಗೆ ನಮ್ಮ ಅಭಿಪ್ರಾಯವನ್ನು ಅವರಿಗೆ ತಿಳಿಸಿದ್ದೇವೆ. ಅವುಗಳನ್ನು ರದ್ದುಗೊಳಿಸುವಂತೆ ನಾವು ಮನವಿ ಮಾಡಿದ್ದೇವೆ. ಈ ಕಾನೂನುಗಳನ್ನು ಹಿಂಪಡೆಯುವುದು ನಿರ್ಣಾಯಕ ಕ್ರಮ ಎಂದು ನಾವು ರಾಷ್ಟ್ರಪತಿಗೆ ತಿಳಿಸಿದ್ದೇವೆ" ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

"ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ರೀತಿ, ರೈತರಿಗೆ ಮಾಡಿದ ಅವಮಾನ ಎಂದು ನಾವು ಭಾವಿಸುತ್ತೇವೆ ಮತ್ತು ಅದಕ್ಕಾಗಿಯೇ ಅವರು ಅದರ ವಿರುದ್ಧ ಈ ಚಳಿಯ ವಾತಾವರಣದಲ್ಲಿಯೂ ಪ್ರತಿಭಟಿಸುತ್ತಿದ್ದಾರೆ" ಎಂದು ಅವರು ಹೇಳಿದರು.

ಕೃಷಿ ಕ್ಷೇತ್ರವನ್ನು "ಪ್ರಧಾನ ಮಂತ್ರಿಯ ಸ್ನೇಹಿತರಿಗೆ" ಹಸ್ತಾಂತರಿಸುವ ಉದ್ದೇಶದಿಂದ ಹೊಸ ಕಾನೂನುಗಳು ರಚನೆಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ,  ಅಲ್ಲದೆ ಆದರೆ ರೈತರು ನಿರ್ಭಯರಾಗಿದ್ದಾರೆ, ಅವರು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಮತ್ತು ಅವರ ಶಾಂತಿಯುತ ಹೋರಾಟ ಮುಂದುವರಿಯುತ್ತದೆ ಎಂದರು.

ಈ ಕೃಷಿ ಕಾನೂನುಗಳನ್ನು ಮಧ್ಯಸ್ಥಗಾರರೊಂದಿಗೆ ಅಥವಾ ಸಂಸತ್ತಿನ ಆಯ್ಕೆ ಸಮಿತಿಯಲ್ಲಿ ಚರ್ಚಿಸದೆ ಜಾರಿ ಮಾಡಲಾಗಿದೆ. ಆ ಕಾರಣದಿಂದ ಅದನ್ನು ರದ್ದು ಮಾಡಬೇಕು.ಎಂದು ವಿವಿಧ ರಾಜಕೀಯ ಪಕ್ಷಗಳು ರಾಷ್ಟ್ರಪತಿಗಳನ್ನು ಕೋರೊದೆಎಂದು ಎನ್‌ಸಿಪಿ ನಾಯಕ ಪವಾರ್ ಹೇಳಿದ್ದಾರೆ. "ಮೂರು ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಂಗೀಕರಿಸಲಾಗಿದೆ ಎಂದು ನಾವು ರಾಷ್ಟ್ರಪತಿಗಳಿಗೆ ತಿಳಿಸಿದ್ದೇವೆ ಮತ್ತು ಈ ಕಾನೂನುಗಳನ್ನು ರದ್ದುಗೊಳಿಸಲು ಮನವಿ ಮಾಡಿದ್ದೇವೆ".  ಎಂದು ಯೆಚೂರಿ ಹೇಳಿದರು.

ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ಕೃಷಿ ಕ್ಷೇತ್ರದ ಪ್ರಮುಖ ಸುಧಾರಣೆಗೆ ನಾಂದಿ ಎಂದು ಕೇಂದ್ರ ಸರ್ಕಾರ ಭಾವಿಸಿದೆ. ಅದು ಮಧ್ಯವರ್ತಿಗಳನ್ನು ಹೊರಗಿಡಲಿದೆ ಮತ್ತು ರೈತರಿಗೆ ತಾವು ಬೆಳೆದ ಬೆಳೆಯನ್ನು ದೇಶದ ಯಾವುದೇ ಭಾಗದಲ್ಲಿ ಮಾರಾಟ ಮಾಡಲು ಅವಕಾಶ ನೀಡುತ್ತದೆ. ಆದಾಗ್ಯೂ, ಪ್ರತಿಭಟನಾ ನಿರತ ರೈತರು ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆಯ ಸುರಕ್ಷತಾ ಅಂಶವನ್ನು ಇಲ್ಲವಾಗಿಸಲು ದಾರಿ ಮಾಡಿಕೊಡುತ್ತವೆ ಮತ್ತು ಮಂಡಿಗಳನ್ನು ನಷ್ಟಕ್ಕೆ ತಳ್ಳುತ್ತವೆ, ಬೃಹತ್ ಕಾರ್ಪೊರೇಟ್ ಸಂಸ್ಥೆಗಳ ಬೆಳವಣಿಗೆ, ಪ್ರಾಬಲ್ಯಕ್ಕೆ ನಾಂದಿಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com