ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ: ಸಿಎಂ ಅಶೋಕ್‌ ಗೆಹ್ಲೋಟ್‌ ಗೆ ಹಿನ್ನಡೆ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

4,371 ಪಂಚಾಯತ್‌ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್‌ 1,718 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.  ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.  ಜಿಲ್ಲಾ ಪರಿಷತ್‌ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್‌ 204 ಸ್ಥಾನಗಳನ್ನು ಗೆದ್ದುಕೊಂಡಿದೆ.

ಪಂಚಾಯತ್ ಸಮಿತಿ ಮತ್ತು ಜಿಲಾ ಪರಿಷತ್ ಸದಸ್ಯರ  ಆಯ್ಕೆ ಮಾಡಲು ಮತ ಎಣಿಕೆ ಇನ್ನೂ ನಡೆಯುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ. ಎರಡು ಚುನಾವಣೆಗಳು ಏಕಕಾಲದಲ್ಲಿ ನಡೆದಿದ್ದವು. ಇನ್ನೂ ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ವಸುಂದರಾ ರಾಜೇ ಶುಭಾಶಯ ಕೋರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್‌ ಪೂನಿಯಾ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಮತ್ತೆ ಜನ ಬೆಂಬಲ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರು ಮತ್ತು ಗ್ರಾಮೀಣ ಭಾಗಕ್ಕೆ ನೀಡಿದ ಅಭಿವೃದ್ಧಿ ಕೆಲಸಗಳಿಂದ ಜನ ನಮಗೆ ಮತ ಹಾಕಿದ್ದಾರೆ. ಇದೊಂದು ಐತಿಹಾಸಿಕ ಜಯ ಎಂದು ಬಣ್ಣಿಸಿದ್ದಾರೆ.

ಏತನ್ಮಧ್ಯೆ, ಸಿಕಾರ್ ಜಿಲ್ಲೆಯ ಫತೇಪುರ್ ಪೊಲೀಸ್ ಠಾಣೆ ಪ್ರದೇಶದಲ್ಲಿ, ಚುನಾವಣಾ ವಿಜಯ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ಜನರ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com