ಪಶ್ಚಿಮ ಬಂಗಾಳ: ಜೆಪಿ ನಡ್ಡಾ ವಾಹನ, ಬೆಂಗಾವಲು ಪಡೆಯ ಮೇಲೆ ಟಿಎಂಸಿ ಕಾರ್ಯಕರ್ತರಿಂದ ದಾಳಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಶೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರ ಡೈಮಂಡ್ ಹಾರ್ಬರ್ ಗೆ ತೆರಳುತ್ತಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಅವರ ಬೆಂಗಾವಲು ಪಡೆಯ ಮೇಲೆ....
ಜೆಪಿ ನಡ್ಡಾ
ಜೆಪಿ ನಡ್ಡಾ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಶೇಕ್ ಬ್ಯಾನರ್ಜಿ ಅವರ ಲೋಕಸಭಾ ಕ್ಷೇತ್ರ ಡೈಮಂಡ್ ಹಾರ್ಬರ್ ಗೆ ತೆರಳುತ್ತಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಅವರ ಬೆಂಗಾವಲು ಪಡೆಯ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ನಡ್ಡಾ ಹಾಗೂ ಇತರೆ ಬಿಜೆಪಿ ನಾಯಕರು ತೆರಳುತ್ತಿದ್ದ ವಾಹನಗಳ ಮೇಲೆ ಕಲ್ಲು ಹಾಗೂ ಸಾಫ್ಟ್ ಡ್ರಿಕ್ಸ್ ಬಾಟಲ್ ಗಳನ್ನು ಎಸೆಯಲಾಗಿದೆ. ನಡ್ಡಾ ಅವರ ಕಾರು ಬುಲೆಟ್ ಪ್ರೂಫ್ ವಾಹನವಾಗಿದ್ದರಿಂದ ಅವರು ಸುರಕ್ಷಿತವಾಗಿದ್ದಾರೆ. ಆದರೆ ಬಿಜೆಪಿ ನಾಯಕರಾದ ಕೈಲಾಶ್ ವಿಜಯವರ್ಗಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ದಿಲಿಪ್ ಘೋಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾಳಿಯಲ್ಲಿ ಕನಿಷ್ಠ ಸುಮಾರು 15 ವಾಹನಗಳು ಜಖಂಗೊಂಡಿವೆ.

ಬುಧವಾರ ಕೋಲ್ಕತ್ತಾಗೆ ಆಗಮಿಸಿದ ನಡ್ಡಾ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಟಿಎಂಸಿ ನೇತೃತ್ವದ ರಾಜ್ಯ ವೈಫಲ್ಯಗಳನ್ನು ಪ್ರದರ್ಶಿಸಲು ಇಂದು ಡೈಮಂಡ್ ಹಾರ್ಬರ್‌ ಗೆ ತೆರಳುತ್ತಿದ್ದರು.

ದಕ್ಷಿಣ 24-ಪರಗಣಗದಲ್ಲಿ ಹಲವು ಬಾರಿ ಬಿಜೆಪಿ ಅಧ್ಯಕ್ಷರ ಪ್ರಯಾಣಕ್ಕೆ ಅಡ್ಡಿಪಡಿಸಲಾಯಿತು. ನಡ್ಡಾ ಪ್ರಯಾಣಿಸಲು ನಿರ್ಧರಿಸಿದ ಮಾರ್ಗದಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿರಲಿಲ್ಲ. ಹೀಗಾಗಿ ಟಿಎಂಸಿ ಬೆಂಬಲಿಗರು ಬೆಂಗಾವಲು ವಾಹನಗಳನ್ನು ಗುರಿಯಾಗಿಸಿಕೊಂಡು ಕೋಲು ಮತ್ತು ಇಟ್ಟಿಗೆಗಳನ್ನು ಎಸೆದು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿ ಸಂಸದ ಮತ್ತು ವಕ್ತಾರ ಸೌಗತಾ ರಾಯ್ ಅವರು, ಘಟನೆ ಅನಿರೀಕ್ಷಿತ."ನಡ್ಡಾ ಅವರು ತೆರಳುವ ಸಂಪೂರ್ಣ ಮಾರ್ಗದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವುದು ಅಸಾಧ್ಯ. ಪೊಲೀಸರನ್ನು ನಿಯೋಜಿಸದ ಸ್ಥಳಗಳಲ್ಲಿ ಈ ದಾಳಿ ನಡೆದಿದೆ" ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com