ರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್

ದೆಹಯಲಿಯ ಸಿಂಘು ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಸಾವಿರಾರು ರೈತರು ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಿಂಘು ಗಡಿಯಲ್ಲಿ ಪೊಲೀಸರು
ಸಿಂಘು ಗಡಿಯಲ್ಲಿ ಪೊಲೀಸರು

ನವದೆಹಲಿ: ದೆಹಯಲಿಯ ಸಿಂಘು ಗಡಿಯಲ್ಲಿ ಕಳೆದ ಎರಡು ವಾರಗಳಿಂದ ಸಾವಿರಾರು ರೈತರು ಕೃಷಿ ಕಾನೂನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

"ಸಿಂಘು ಗಡಿಯಲ್ಲಿ ನಿಯೋಜಿಸಲಾಗಿದ್ದ ಡಿಸಿಪಿ ರ್ಯಾಂಕ್ ನ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೆಲವು ದಿನಗಳ ಹಿಂದೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ. ಇಬ್ಬರೂ ಕ್ವಾರಂಟೈನ್ ನಲ್ಲಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ರಾಷ್ಟ್ರ ರಾಜಧಾನಿ ಪ್ರವೇಶಿಸದಂತೆ ತಡೆಯುವುದಕ್ಕಾಗಿ ಗಡಿಯಲ್ಲಿ ನೂರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಗ ಇಬ್ಬರು ಅಧಿಕಾರಿಗಳಿಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ನೂರಾರು ಪೊಲೀಸ್ ಸಿಬ್ಬಂದಿ ಹಾಗೂ ಸಾವಿರಾರು ಸಂಖ್ಯೆ ಸೇರಿರುವ ರೈತರಿಗೆ ಆತಂಕ ಶುರುವಾಗಿದೆ.

ನಿನ್ನೆಯಷ್ಟೇ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದ ರೈತರು, ಮುಂದಿನ ದಿನಗಳಲ್ಲಿ ರೈಲ್ವೆ ಹಳಿಗಳನ್ನು ಸಹ ಬಂದ್ ಮಾಡುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com