ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ 

ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್‌ ಪಕ್ಷ  ಹಿಂಪಡೆದುಕೊಂಡಿದೆ
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್‌ ಪಕ್ಷ  ಹಿಂಪಡೆದುಕೊಂಡಿದೆ. 

ಇಲ್ಲಿನ ದುಂಗಾರ್‌ಪುರ್‌ನಲ್ಲಿ ಜಿಲ್ಲಾ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಬಿಜೆಪಿಗೆ ಸೇರಿ ಬಿಟಿಪಿ ಪಕ್ಷಕ್ಕೆ ಅಧಿಕಾರ ತಪ್ಪಿಸಿದ್ದರಿಂದ ಬಿಟಿಪಿಯ ವರಿಷ್ಠರು ಕಾಂಗ್ರೆಸ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಮುಖ್ಯಸ್ಥರ ಹುದ್ದೆಗೆ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿಯ ಸೂರ್ಯ ಅಹಾರಿ, ಕಾಂಗ್ರೆಸ್ ಬೆಂಬಲದೊಂದಿಗೆ ಬಿಟಿಪಿ ಬೆಂಬಲಿತ ಪಾರ್ವತಿಯನ್ನು ಒಂದೇ ಮತದಿಂದ ಸೋಲಿಸಿ ಜಿಲ್ಲಾ ಅಧ್ಯಕ್ಷರ ಹುದ್ದೆಯಲ್ಲಿ ಗೆಲುವು ಸಾಧಿಸಿದರು.

ಗೆಹ್ಲೋಟ್‌ ಸರ್ಕಾರ ಇಕ್ಕಟ್ಟಿನಲ್ಲಿ ಇದ್ದಾಗ ಸಹಾಯ ಮಾಡಿದೆವು. ಆದರೆ ಅವರು ನಮಗೆ ಮೋಸ ಮಾಡಿದರು ಎಂದು ಬಿಟಿಪಿ ಮುಖಂಡರು ಆರೋಪಿಸಿದ್ದಾರೆ.  200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ 105 ಸ್ಥಾನಗಳನ್ನು ಹೊಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com