ಜನಸಂಖ್ಯೆ ನಿಯಂತ್ರಣ ಸಂಬಂಧ ಪಿಐಎಲ್: ಒತ್ತಾಯದ ಕುಟುಂಬ ಯೋಜನೆ ಸಾಧ್ಯವಿಲ್ಲ, 'ಸುಪ್ರೀಂ'ಗೆ ಕೇಂದ್ರ ಮಾಹಿತಿ!

ತನ್ನ ದೇಶದ ಜನರ ಮೇಲೆ ಕುಟುಂಬ ಯೋಜನೆಯನ್ನು ಒತ್ತಾಯಪೂರ್ವಕವಾಗಿ ಹೇರಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ತನ್ನ ದೇಶದ ಜನರ ಮೇಲೆ ಕುಟುಂಬ ಯೋಜನೆಯನ್ನು ಒತ್ತಾಯಪೂರ್ವಕವಾಗಿ ಹೇರಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನಿರ್ದಿಷ್ಟ ಸಂಖ್ಯೆಯ ಮಕ್ಕಳನ್ನು ಹೊಂದುವಂತೆ ಮಾಡುವುದು ಬಲವಂತದ ಪ್ರತಿ ಉತ್ಪಾದಕವಾಗಿದ್ದು ಜನಸಂಖ್ಯಾ ವಿರೂಪಗಳಿಗೆ ಕಾರಣವಾಗುತ್ತದೆ ಎಂದು ಆರೋಗ್ಯ ಸಚಿವಾಲಯವು ಸುಪ್ರಿಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದೆ.

ದೇಶದಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮವು ಸ್ವಯಂಪ್ರೇರಿತ ಸ್ವಭಾವದ್ದಾಗಿದೆ. ಇದು ದಂಪತಿಗಳಿಗೆ ತಮ್ಮ ಕುಟುಂಬದ ಗಾತ್ರವನ್ನು ನಿರ್ಧರಿಸಲು ಮತ್ತು ಕುಟುಂಬ ಯೋಜನೆ ವಿಧಾನಗಳನ್ನು ಅಳವಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.

ದೇಶದ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎರಡೇ ಮಕ್ಕಳು ಸೇರಿದಂತೆ ಕೆಲವು ಕ್ರಮಗಳನ್ನು ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.  

'ಸಾರ್ವಜನಿಕ ಆರೋಗ್ಯ' ರಾಜ್ಯಗಳ ವಿಷಯವಾಗಿದೆ. ಜನರನ್ನು ಆರೋಗ್ಯದ ಅಪಾಯಗಳಿಂದ ರಕ್ಷಿಸಲು ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದ ಸುಧಾರಣೆಯ ಪ್ರಕ್ರಿಯೆಯನ್ನು ಸೂಕ್ತ ಮತ್ತು ಸುಸ್ಥಿರ ರೀತಿಯಲ್ಲಿ ಮುನ್ನಡೆಸಬೇಕು ಎಂದು ಸಚಿವಾಲಯ ಹೇಳಿದೆ.

ರಾಜ್ಯಗಳಲ್ಲಿ ಮಾರ್ಗಸೂಚಿಗಳು ಮತ್ತು ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಇದು ಯಾವುದೇ ನೇರ ಪಾತ್ರವನ್ನು ಹೊಂದಿಲ್ಲ ಮತ್ತು ನಿಗದಿತ ಮಾರ್ಗಸೂಚಿಗಳ ಪ್ರಕಾರ ಯೋಜನೆಗಳನ್ನು ಜಾರಿಗೆ ತರುವುದು ಆಯಾ ರಾಜ್ಯ ಸರ್ಕಾರಗಳ ಅಧಿಕಾರವಾಗಿದೆ ಎಂದು ಸಚಿವಾಲಯ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com