ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೋನಾ ಪಾಟಿಸಿವ್

ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾಗೆ ಕೊರೋನಾ ವೈರಸ್ ವಕ್ಕರಿಸಿದೆ.
ಜೆಪಿ ನಡ್ಡಾ
ಜೆಪಿ ನಡ್ಡಾ

ನವದೆಹಲಿ: ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾಗೆ ಕೊರೋನಾ ವೈರಸ್ ವಕ್ಕರಿಸಿದೆ.

ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವುದಾಗಿ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

60 ವರ್ಷದ ನಡ್ಡಾ ಅವರು ಕೊರೋನಾ ಪ್ರಾಥಮಿಕ ರೋಗಲಕ್ಷಣಗಳನ್ನು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದರು. ಆದರೆ ಅವರ ಆರೋಗ್ಯವು ಉತ್ತಮವಾಗಿದೆ ಎಂದು ಹೇಳಿದ್ದಾರೆ. 

ಹಿಂದಿಯಲ್ಲಿ ಅವರು ಮಾಡಿದ ಟ್ವೀಟ್‌ನಲ್ಲಿ, ಕಳೆದ ಕೆಲವು ದಿನಗಳಿಂದ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ಪರೀಕ್ಷೆಗೆ ಒಳಪಡಿಸುವಂತೆ ಕೇಳಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com