ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರಿಂದ ಸಿಸಿಟಿವಿ ಧ್ವಂಸ

ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಬಾಕಿ ಇರುವ ಹಣ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರು ಭಾನುವಾರ ಸಂಜೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ದೆಹಲಿ ಸರ್ಕಾರದ ಮೂಲಗಳು ತಿಳಿಸಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಬಾಕಿ ಇರುವ ಹಣ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರು ಭಾನುವಾರ ಸಂಜೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ದೆಹಲಿ ಸರ್ಕಾರದ ಮೂಲಗಳು ತಿಳಿಸಿವೆ.

ಬಿಜೆಪಿಯ ಮಹಿಳಾ ಕೌನ್ಸಿಲರ್‌ಗಳು ತಮ್ಮ ಖಾಸಗಿತನ ಕಾಪಾಡಿಕೊಳ್ಳಲು ಎಎಪಿ ಸರ್ಕಾರ ಹಾಕಿದ್ದ ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದಿದ್ದಾರೆ ಎಂದು ಉತ್ತರ ದೆಹಲಿ ಮೇಯರ್ ಜೈ ಪ್ರಕಾಶ್ ಅವರು ಹೇಳಿದ್ದಾರೆ.

ಈ ಮಧ್ಯೆ, ಸಿಎಂ ನಿವಾಸದ ಹೊರಗೆ ಜಮಾಯಿಸಿದ ಕೆಲವರು ಗೋಡೆಯ ಮೇಲೆ ಇದ್ದ ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಸಂಬಂಧ ಬಿಜೆಪಿ ಮುಖಂಡರ ವಿರುದ್ಧ ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ನುಗ್ಗಿ ಆಸ್ತಿ-ಪಾಸ್ತಿ ಹಾಗೂ ಸಿಸಿಟಿವಿ ಧ್ವಂಸಗೊಳಿಸಿದ್ದಾರೆ ಎಂದು ಆಡಳಿತರೂಢ ಎಎಪಿ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com