ಅಮಿತ್ ಶಾ ನಿವಾಸದ ಹೊರಗಡೆ ಪ್ರತಿಭಟನೆ: ಎಎಪಿ ಮನವಿ ತಿರಸ್ಕರಿಸಿದ ದೆಹಲಿ ಪೊಲೀಸರು

ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಧಾ ಮಾಡಿದ ಮನವಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಧಾ ಮಾಡಿದ ಮನವಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ.

ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಹಣ ದುರುಪಯೋಗ ಆರೋಪದ ಮೇರೆಗೆ ಭಾನುವಾರ ಅಮಿತ್ ಶಾ ಅವರ ಮನೆಯ ಹೊರಗಡೆ ಪ್ರತಿಭಟನಾ ಧರಣಿ ನಡೆಸಲು ಎಎಪಿ ಯೋಜನೆ ಹಾಕಿಕೊಂಡಿತ್ತು.

ಕೇಂದ್ರ ಗೃಹ ಸಚಿವರ ನಿವಾಸದ ಹೊರಗಡೆ ಯಾವುದೇ ರೀತಿಯ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ, ನಿಮ್ಮ ಮನವಿಯನ್ನು ತಿರಸ್ಕರಿಸಿದ್ದು, ದೆಹಲಿ ಪೊಲೀಸರೊಂದಿಗೆ ಸಹಕರಿಸುವಂತೆ  ಮನವಿ ಮಾಡುವುದಾಗಿ ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಕೋವಿಡ್-19 ನಿಯಂತ್ರಣದ ದೃಷ್ಟಿಯಿಂದ ಎಲ್ಲಾ ದೆಹಲಿಯಲ್ಲಿ ಎಲ್ಲಾ ರೀತಿಯ ಸಾಮಾಜಿಕ, ಅಕಾಡೆಮಿಕ್, ಕ್ರೀಡಾ, ಮನೋರಂಜನಾತ್ಮಕ, ಧಾರ್ಮಿಕ ಮತ್ತು ರಾಜಕೀಯ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com