ಜೈಪುರ ಹೆದ್ದಾರಿ ಬಂದ್ ಮಾಡಲು ರೈತರ ಪ್ಲಾನ್: ದೆಹಲಿ- ಹರಿಯಾಣ ಗಡಿ ಭಾಗದಲ್ಲಿ ಪೊಲೀಸ್ ಕಟ್ಟೆಚ್ಚರ

ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು,ಗುರಾಗಾಂವ್ ಮೂಲಕ ಸಾಗುವ ಜೈಪುರ ರಾಷ್ಟ್ರೀಯ ಹೆದ್ದಾರಿ -8ನ್ನು ಬಂದ್ ಮಾಡಲು ರೈತರು ಪ್ಲಾನ್ ಮಾಡಿದ್ದು, ದೆಹಲಿ- ಹರಿಯಾಣ ಗಡಿ ಭಾಗದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಜೈಪುರ ಹೆದ್ದಾರಿಯಲ್ಲಿ ಪೊಲೀಸ್ ಕಟ್ಟೆಚ್ಚರ
ಜೈಪುರ ಹೆದ್ದಾರಿಯಲ್ಲಿ ಪೊಲೀಸ್ ಕಟ್ಟೆಚ್ಚರ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು,ಗುರಗಾಂವ್ ಮೂಲಕ ಸಾಗುವ ಜೈಪುರ ರಾಷ್ಟ್ರೀಯ ಹೆದ್ದಾರಿ -8ನ್ನು ಬಂದ್ ಮಾಡಲು ರೈತರು ಪ್ಲಾನ್ ಮಾಡಿದ್ದು, ದೆಹಲಿ- ಹರಿಯಾಣ ಗಡಿ ಭಾಗದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಹೆಚ್ಚಿನ ಬ್ಯಾರಿಯರ್ ಗಳು ಮತ್ತು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಸಿಂಘು, ಟಿಕ್ರಿ ಸೇರಿದಂತೆ ರಾಷ್ಟ್ರ ರಾಜಧಾನಿಯ ವಿವಿಧ ಗಡಿ ಭಾಗಗಳಲ್ಲಿ ಕಳೆದ 17 ದಿನಗಳಿಂದ ಸಹಸ್ರಾರು ರೈತರು ಪ್ರತಿಭಟನೆ ನಡೆಸುತ್ತಿರುವಂತೆಯೇ ಜೈಪುರ- ದೆಹಲಿ ಹೆದ್ದಾರಿಯನ್ನು ಬಂದ್ ಮಾಡುವುದಾಗಿ ರೈತ ಯೂನಿಯನ್ ಗಳು ಘೋಷಿಸಿವೆ.

ನೂತನ ಕಾನೂನುಗಳನ್ನು ರದ್ದುಪಡಿಸಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದರೆ,  ಈ ಬೇಡಿಕೆಗಳಿಗೆ ಸರ್ಕಾರ ಮಣಿಯದಿದ್ದರೆ ನಾಳೆ  ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರೈತ ಮುಖಂಡರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com