ಗ್ರಾಮ ಪಂಚಾಯತ್ ಚುನಾವಣೆಯನ್ನು ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಿ- ಆಯೋಗ ಕಟ್ಟಾಜ್ಞೆ
ರಾಜ್ಯದಲ್ಲಿ ಇದೇ 22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.
Published: 13th December 2020 03:25 PM | Last Updated: 13th December 2020 03:25 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಇದೇ 22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಸತ್ ಸಂಪ್ರದಾಯಗಳನ್ನು ಗಾಳಿಗೆ ತೂರಿ ಪಕ್ಷದ ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಿ ಗ್ರಾಮ ಪಂಚಾಯತ್ ಚುನಾವಣೆಯನ್ನು ರಾಜಕೀಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಗ ಗರಂ ಆಗಿದೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು, ರಾಜಕೀಯದಿಂದ ಪಂಚಾಯತ್ ಗಳನ್ನು ಮುಕ್ತಗೊಳಿಸಬೇಕು. ಇಂತಹ ಕಲುಷಿತ ವಾತಾವರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಂತೆ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.