ಪ್ರಣಬ್ ಮುಖರ್ಜಿಯ ಪುಸ್ತಕ ಸಂಪೂರ್ಣ ಓದುವವರೆಗೆ ಪ್ರತಿಕ್ರಿಯಿಸುವುದಿಲ್ಲ: ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿದ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ ಅವರ ಪುಸ್ತಕದ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪುಸ್ತಕ ಸಂಪೂರ್ಣ ಓದಿದ ನಂತರ ಪ್ರತಿಕ್ರಿಯಿಸುವುದಾಗಿ ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಪ್ರಣವ್ ಮುಖರ್ಜಿ
ಪ್ರಣವ್ ಮುಖರ್ಜಿ

ಬೆಂಗಳೂರು: ಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿದ ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ ಅವರ ಪುಸ್ತಕದ ಬಗ್ಗೆ ಈಗಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪುಸ್ತಕ ಸಂಪೂರ್ಣ ಓದಿದ ನಂತರ ಪ್ರತಿಕ್ರಿಯಿಸುವುದಾಗಿ ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿಗಳು ಬರೆದ ಪುಸ್ತಕ ಇನ್ನೂ ಬಿಡುಗಡೆಯಾಗಿಲ್ಲ. ಮುಖರ್ಜಿ ಅವರು ಅವಲೋಕನ ಮಾಡಿದ ಸಂದರ್ಭವನ್ನು ಅರ್ಥಮಾಡಿಕೊಳ್ಳಬೇಕಾಗಿತ್ತದೆ ಎಂದು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ಎಂ ವೀರಪ್ಪ ಮೊಯ್ಲಿ ಅವರು ಹೇಳಿದ್ದಾರೆ.

ನಾನು ಪುಸ್ತಕವನ್ನು ಪೂರ್ಣವಾಗಿ ಓದುವವರೆಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮೊಯ್ಹಿ ತಿಳಿಸಿದ್ದಾರೆ.

ಮೊದಲು ಪುಸ್ತಕವನ್ನು ಪೂರ್ಣವಾಗಿ ಓದಬೇಕಾಗಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರು ಹೇಳಿದ್ದಾರೆ.

ಕಾಂಗ್ರೆಸ್‌ 2014ರ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಕಾರಣ ಎಂದು ಪ್ರಣಬ್‌ ಮುಖರ್ಜಿ ತಮ್ಮ ಕೊನೆಯ ಪುಸ್ತಕದಲ್ಲಿ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಕೊನೆಯುಸಿರೆಳೆದಿರುವ ಪ್ರಣಬ್‌ ಅವರ ಕೊನೆಯ ಕೃತಿ ‘ದಿ ಪ್ರೆಸಿಡೆನ್ಶಿಯಲ್‌ ಇಯರ್ಸ್‌’ ಮುಂದಿನ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಅದರಲ್ಲಿ ಈ ಉಲ್ಲೇಖ ಇದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com