ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ
ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಒಟ್ಟು 1,775 ವಾರ್ಡ್‌ಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ 620 ಸ್ಥಾನಗಳಲ್ಲಿ ಜಯ ಸಾಧಿಸಿದೆ.
Published: 14th December 2020 02:01 PM | Last Updated: 14th December 2020 02:27 PM | A+A A-

ಸಾಂದರ್ಭಿಕ ಚಿತ್ರ
ಜೈಪುರ: ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಒಟ್ಟು 1,775 ವಾರ್ಡ್‌ಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ 620 ಸ್ಥಾನಗಳಲ್ಲಿ ಜಯ ಸಾಧಿಸಿದೆ.
ಬಿಜೆಪಿ 548 ಹಾಗೂ ಸ್ವತಂತ್ರ ಅಭ್ಯರ್ಥಿಗಳು 595 ಸ್ಥಾನಗಳನ್ನು ಬಾಚಿಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಬಹುಜನ ಸಮಾಜ ಪಕ್ಷದ ಏಳು ಅಭ್ಯರ್ಥಿಗಳು, ಸಿಪಿಐ ಹಾಗೂ ಸಿಪಿಎಂನ ತಲಾ ಇಬ್ಬರು ಹಾಗೂ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ(ಆರ್‌ಎಲ್‌ಪಿ)ಪಕ್ಷ ಒಂದು ಸ್ಥಾನದಲ್ಲಿ ಜಯ ಸಾಧಿಸಿದೆ. ರಾಜಸ್ಥಾನದ 12 ಜಿಲ್ಲೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.
ಇನ್ನೂ ಚುನಾವಣಾ ಫಲಿತಾಂಶಕ್ಕೆ ಸಂತಸ ವ್ಯಕ್ತ ಪಡಿಸಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಎಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇರಿಸಿ ಪಕ್ಷದ ಗೆಲುವಿಗೆ ಕಾರಣರಾದ ಜನತೆಗೂ ಅಭಿನಂದನೆ ಸಲ್ಲಿಸಿದ್ದಾರೆ.