ಬಾಹ್ಯಾಕಾಶ ವಲಯದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಪ್ರಧಾನಿ ಮೋದಿ ಒತ್ತು

ಬಾಹ್ಯಾಕಾಶ ವಲಯದ ಯೋಜನೆಯಲ್ಲಿ ಖಾಸಗಿ ಸಹಭಾಗಿತ್ವದ ಪಾಲುದಾರಿಕೆ ಹೆಚ್ಚಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಬಾಹ್ಯಾಕಾಶ ವಲಯದ ಯೋಜನೆಯಲ್ಲಿ ಖಾಸಗಿ ಸಹಭಾಗಿತ್ವದ ಪಾಲುದಾರಿಕೆ ಹೆಚ್ಚಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಈ ವರ್ಷದ ಜೂನ್‌ ತಿಂಗಳಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಬಾಹ್ಯಾಕಾಶ ವಲಯದಲ್ಲಿ ಖಾಸಗಿ ವಲಯದ ಕಂಪನಿಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿತ್ತು.

ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ(ಐಎನ್-ಸ್ಪೇಸ್) ರಚನೆಯೊಂದಿಗೆ, ಸುಧಾರಣೆಗಳು ಖಾಸಗಿ ಕಂಪನಿಗಳು ಮತ್ತು ಸ್ಟಾರ್ಟ್ ಅಪ್‌ಗಳಿಗೆ ಒಂದು ಮಟ್ಟದ ವೇದಿಕೆ ಒದಗಿಸುತ್ತದೆ. ಹಲವಾರು ಉದ್ಯಮಗಳು ಬಾಹ್ಯಾಕಾಶ ಇಲಾಖೆಯ ಅಡಿಯಲ್ಲಿ ಇನ್-ಸ್ಪೇಸ್‌ನೊಂದಿಗೆ ಪ್ರಸ್ತಾಪಗಳನ್ನು ಸಲ್ಲಿಸುತ್ತವೆ.

ಈ ಪ್ರಸ್ತಾಪಗಳು ಉಪಗ್ರಹ ನಕ್ಷತ್ರಪುಂಜ, ಸಣ್ಣ ಉಪಗ್ರಹ ಉಡಾವಣಾ ವಾಹನಗಳು, ನೆಲದ ಕೇಂದ್ರ, ಜಿಯೋಸ್ಪೇಷಿಯಲ್ ಸೇವೆಗಳು, ಪ್ರೊಪಲ್ಷನ್ ವ್ಯವಸ್ಥೆಗಳು ಮತ್ತು ಅಪ್ಲಿಕೇಶನ್ ಉತ್ಪನ್ನಗಳು ಸೇರಿದಂತೆ ವ್ಯಾಪಕವಾದ ಚಟುವಟಿಕೆಗಳಿಗೆ ಸಂಬಂಧಿಸಿದ್ದಾಗಿವೆ ಎಂದರು.

ರಾಕೆಟ್ ಗಳು ಮತ್ತು ಉಪಗ್ರಹಗಳನ್ನು ತಯಾರಿಸುವ ಕಂಪನಿಗಳ ಯೋಜನೆಗಳನ್ನು ಪರಿಶೀಲಿಸಿದ ಪ್ರಧಾನಿ, ಇದು ಒಂದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಇದು ಬಾಹ್ಯಾಕಾಶ ಕ್ಷೇತ್ರಕ್ಕೆ ಭಾರತದ ಪ್ರವೇಶವನ್ನು ಮತ್ತಷ್ಟು ಬಲಪಡಿಸುತ್ತದೆ. 

ಈ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಯು ಹೈಟೆಕ್ ಉದ್ಯೋಗಗಳ ಸೃಷ್ಟಿಗೆ ಕಾರಣವಾಗಲಿದ್ದು,ಐಐಟಿ, ಎನ್ ಐಟಿ ಮತ್ತು ಇತರ ತಾಂತ್ರಿಕ ಸಂಸ್ಥೆಗಳ ಪ್ರತಿಭೆಗಳಿಗೆ  ಅವಕಾಶಗಳನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. 

ಈಗಾಗಲೇ 25 ಉದ್ಯಮಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಮುಂದೆ ಬಂದಿವೆ ಎಂದು ಇಸ್ರೋ ಅಧ್ಯಕ್ಷ ಡಾ.ಕೆ.ಸಿವನ್ ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com