ರೈತರೊಂದಿಗೆ ಮಾತುಕತೆ ಮುಂದುವರಿಸಲು ಸರ್ಕಾರ ಸಿದ್ಧ, ಎಂಎಸ್ ಪಿ ಮುಂದುವರಿಯುತ್ತದೆ: ಕೇಂದ್ರ ಸಚಿವ ತೋಮರ್

ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ಬಿಕ್ಕಟ್ಟು ಮುಂದುವರಿದಿದ್ದು,
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್

ನವದೆಹಲಿ: ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ಬಿಕ್ಕಟ್ಟು ಮುಂದುವರಿದಿದ್ದು, ನಿಜವಾದ ರೈತರ ಸಂಘಟನೆಳೊಂದಿಗೆ ಮಾತುಕತೆ ಮುಂದುವರೆಸಲು ಸರ್ಕಾರ ಸಿದ್ಧ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮಂಗಳವಾರ ಹೇಳಿದ್ದಾರೆ.

ಕೃಷಿ ಕಾಯ್ದೆಗಳನ್ನು ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಸ್ವಾಗತಿಸಲಾಗಿದೆ. ಈ ಬಗ್ಗೆ ಗೊಂದಲಗಳಿದ್ದರೆ ಕೇಂದ್ರ ಸರ್ಕಾರವು "ನಿಜವಾದ ರೈತ ಸಂಘಟನೆಗಳೊಂದಿಗೆ ಮಾತುಕತೆ ಮುಂದುವರಿಸಲು ಸಿದ್ಧವಾಗಿದೆ" ಒಕ್ಕೂಟಗಳು "ಮುಕ್ತ ಮನಸ್ಸಿನಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ತೋಮರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರಿಂದ ಉತ್ಪನ್ನಗಳನ್ನು ಖರೀದಿಸಲು ಸರ್ಕಾರ ಬದ್ಧವಾಗಿದ್ದು, ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಆಡಳಿತಾತ್ಮಕ ನಿರ್ಧಾರವಾಗಿದೆ ಮತ್ತು ಅದು "ಹಾಗೆಯೇ ಮುಂದುವರಿಯುತ್ತದೆ" ಎಂದು ಸಚಿವರು ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶದ ಭಾರತೀಯ ಕಿಸಾನ್ ಯೂನಿಯನ್(ಕಿಸಾನ್) ಸದಸ್ಯರು ಇಂದು ತೋಮರ್ ಅವರನ್ನು ಭೇಟಿ ಮಾಡಿ,  ಕೃಷಿ ಕಾಯ್ದೆಗಳು ಮತ್ತು ಎಂಎಸ್ ಪಿಗೆ ಸಂಬಂಧಿಸಿದ ಸಲಹೆಗಳ ಜ್ಞಾಪನ ಪತ್ರವನ್ನು ಸಲ್ಲಿಸಿದರು. ಅಲ್ಲದೆ ಸಚಿವ ಭೇಟಿಯ ಬಳಿಕ ಉತ್ತರ ಪ್ರದೇಶದ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲು ಭಾರತೀಯ ಕಿಸಾನ್ ಯೂನಿಯನ್ ನಿರ್ಧರಿಸಿದೆ.

ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡರಿಗೆ ತೋಮರ್ ಧನ್ಯವಾದ ಅರ್ಪಿಸಿದ್ದು, ಈ ಕಾನೂನುಗಳನ್ನು ದೇಶದ ವಿವಿಧ ರಾಜ್ಯಗಳಲ್ಲಿ ಸ್ವಾಗತಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com